ನಮ್ಮದು ಸಣ್ಣಪುಟ್ಟ ಜಗಳ - ಜಗಳಕ್ಕಿಂತ ಮಹಾರಾಷ್ಟ್ರ ದೊಡ್ಡದು : ಉದ್ಧವ್‌, ರಾಜ್‌ ಠಾಕ್ರೆ ಒಂದಾಗುವ ಸುಳಿವು!

KannadaprabhaNewsNetwork |  
Published : Apr 20, 2025, 01:45 AM ISTUpdated : Apr 20, 2025, 04:37 AM IST
ಠಾಕ್ರೆ | Kannada Prabha

ಸಾರಾಂಶ

ಕಳೆದ 5 ವರ್ಷಗಳಲ್ಲಿ ಭಾರೀ ರಾಜಕೀಯ ಬದಲಾವಣೆಗೆ ಸಾಕ್ಷಿಯಾದ ಮಹಾರಾಷ್ಟ್ರದಲ್ಲಿ ಶೀಘ್ರವೇ ಮತ್ತೊಂದು ಮಹಾವಿಲೀನದ ಸಾಧ್ಯತೆ ಕಂಡುಬಂದಿದೆ. 2005ರಲ್ಲಿ ಪರಸ್ಪರ ಬೇರಾಗಿದ್ದ ಶಿವಸೇನೆ (ಉದ್ಧವ್‌ ಬಣ) ಮತ್ತು ಸೋದರ ಸಂಬಂಧಿ ರಾಜ್‌ ಠಾಕ್ರೆ (ಎಂಎನ್‌ಎಸ್‌) ಮತ್ತೆ ಒಂದಾಗುವ ಸುಳಿವು ನೀಡಿದ್ದಾರೆ.  

ನವದೆಹಲಿ: ಕಳೆದ 5 ವರ್ಷಗಳಲ್ಲಿ ಭಾರೀ ರಾಜಕೀಯ ಬದಲಾವಣೆಗೆ ಸಾಕ್ಷಿಯಾದ ಮಹಾರಾಷ್ಟ್ರದಲ್ಲಿ ಶೀಘ್ರವೇ ಮತ್ತೊಂದು ಮಹಾವಿಲೀನದ ಸಾಧ್ಯತೆ ಕಂಡುಬಂದಿದೆ. 2005ರಲ್ಲಿ ಪರಸ್ಪರ ಬೇರಾಗಿದ್ದ ಶಿವಸೇನೆ (ಉದ್ಧವ್‌ ಬಣ) ಮತ್ತು ಸೋದರ ಸಂಬಂಧಿ ರಾಜ್‌ ಠಾಕ್ರೆ (ಎಂಎನ್‌ಎಸ್‌) ಮತ್ತೆ ಒಂದಾಗುವ ಸುಳಿವು ನೀಡಿದ್ದಾರೆ. ಇಬ್ಬರೂ ನಾಯಕರೂ ಅಸ್ತಿತ್ವದ ಪ್ರಶ್ನೆ ಎದುರಿಸುತ್ತಿರುವ ಹೊತ್ತಿನಲ್ಲೇ ಈ ಬೆಳವಣಿಗೆ ನಡೆದಿದೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ರಾಜ್‌ ಠಾಕ್ರೆ, ‘ನನ್ನ ಮತ್ತು ಉದ್ಧವ್‌ ಠಾಕ್ರೆ ನಡುವಿನ ವೈಮನಸ್ಯ ಸಣ್ಣದು. ಉಳಿದೆಲ್ಲದ್ದಕ್ಕಿಂತ ಮಹಾರಾಷ್ಟ್ರ ವಿಷಯ ದೊಡ್ಡದು. ನಮ್ಮ ನಡುವಿನ ಭಿನ್ನಾಭಿಪ್ರಾಯ ಮಹಾರಾಷ್ಟ್ರ ಮತ್ತು ಮರಾಠಿ ಜನರ ಅಸ್ತಿತ್ವಕ್ಕೆ ಪೆಟ್ಟು ನೀಡಿದೆ. ಹೀಗಾಗಿ ಇಲ್ಲಿ ನಾನು ಎಂಬುದನ್ನು ಬಿಟ್ಟು ವಿಶಾಲ ದೃಷ್ಟಿಕೋನದಿಂದ ನೋಡಿದರೆ ಎಲ್ಲರೂ ಒಂದಾಗಬಹುದು. ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಇರುವ ಮರಾಠಿಗಳು ಒಂದಾಗಬೇಕು ಮತ್ತು ಒಂದೇ ರಾಜಕೀಯ ಪಕ್ಷ ಸ್ಥಾಪನೆ ಮಾಡಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ಉದ್ಧವ್‌ ಠಾಕ್ರೆ ಕೂಡಾ ಇಂಥ ಪ್ರಸ್ತಾವಕ್ಕೆ ತಮ್ಮ ಷರತ್ತುಬದ್ಧ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಲು ನಾನು ಸಿದ್ಧ. ಮಹಾರಾಷ್ಟ್ರದ ಹಿತಾಸಕ್ತಿ ಕಾಪಾಡಲು ಎಲ್ಲಾ ಮರಾಠಿಗರು ಒಂದಾಗಬೇಕು ಎಂದು ನಾನು ಕರೆ ಕೊಡುತ್ತೇನೆ. ಆದರೆ ಇದಕ್ಕೊಂದು ಷರತ್ತಿದೆ. ಎಲ್ಲಾ ಕೈಗಾರಿಕೆಗಳನ್ನೂ ಗುಜರಾತ್‌ಗೆ ವರ್ಗಾಯಿಸಲಾಗುತ್ತಿದೆ ಎಂದು ನಾವು ಸಂಸತ್ತಿನಲ್ಲಿ ಪ್ರಸ್ತಾಪಿಸಿದಾಗ ನಾವೆಲ್ಲಾ ಒಂದಾಗಿದ್ದರೆ, ಮಹಾರಾಷ್ಟ್ರಕ್ಕೆ ಲಾಭ ತರುವ ಸರ್ಕಾರವನ್ನು ನಾವು ರಚಿಸಬಹುದಿತ್ತು. ಇದು ಸಾಧ್ಯವಾಗಬೇಕಾದರೆ ನಾವು ಅತ್ತಿಂದಿತ್ತ ಪಕ್ಷ ಬದಲಾವಣೆ ಮಾಡಬಾರದು. ಒಂದು ದಿನ ಅವರನ್ನು ಬೆಂಬಲಿಸುವುದು, ಇನ್ನೊಂದು ದಿನ ಅವರನ್ನು ವಿರೋಧಿಸುವುದು ಮತ್ತೆ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಆಗಬಾರದು ಎಂದು. ಈ ವಿಷಯದಲ್ಲಿ ಖಚಿತ ನಿಲವು ಹೊಂದಿದ್ದರೆ ನಾವು ಮುಂದಿನ ಹೆಜ್ಜೆ ಇಡಬಹುದು ಎಂದು ಹೇಳಿದ್ದಾರೆ.

PREV

Recommended Stories

15 ವರ್ಷ ಬಳಿಕ ಗುಜರಿ ವ್ಯಾಪ್ತಿಗೆಎಲೆಕ್ಟ್ರಿಕ್‌ ವಾಹನಗಳು ಬರಲ್ಲ?
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ