ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4

Published : Aug 23, 2025, 05:04 AM IST
Siddaramaiah

ಸಾರಾಂಶ

ದೇಶದ 30 ಮುಖ್ಯಮಂತ್ರಿಗಳಲ್ಲಿ 12 ಮಂದಿ ಅಥವಾ ಶೇ.40ರಷ್ಟು ಮುಖ್ಯಮಂತ್ರಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ‘ಎಡಿಆರ್‌’ ವರದಿ ತಿಳಿಸಿದೆ.

 ನವದೆಹಲಿ :  ದೇಶದ 30 ಮುಖ್ಯಮಂತ್ರಿಗಳಲ್ಲಿ 12 ಮಂದಿ ಅಥವಾ ಶೇ.40ರಷ್ಟು ಮುಖ್ಯಮಂತ್ರಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ‘ಎಡಿಆರ್‌’ ವರದಿ ತಿಳಿಸಿದೆ. 

ಇದರಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 4ನೇ ಸ್ಥಾನದಲ್ಲಿದ್ದಾರೆ.ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿರುದ್ಧ 89 ಪ್ರಕರಣಗಳು ದಾಖಲಾಗಿದ್ದು, ಇದು ಅತಿ ಹೆಚ್ಚು, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ 47 ಪ್ರಕರಣಗಳನ್ನು ಘೋಷಿಸಿದ್ದಾರೆ.ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು 19, ಕರ್ನಾಟಕದ ಸಿದ್ದರಾಮಯ್ಯ 13 ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ 5 ಪ್ರಕರಣಗಳನ್ನು ಘೋಷಿಸಿ ಕೊಂಡಿದ್ದಾರೆ. 

ಮಹಾರಾಷ್ಟ್ರ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಸುಖವಿಂದರ್ ಸುಖು ತಲಾ 4 ಪ್ರಕರಣ, ಕೇರಳ ಸಿಎಂ ಪಿಣರಾಯಿ ವಿಜಯನ್ 2 ಪ್ರಕರಣ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಒಂದು ಪ್ರಕರಣವನ್ನು ಘೋಷಿಸಿದ್ದಾರೆ. 

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ 30 ದಿನಗಳ ಕಾಲ ಬಂಧಿಸಲ್ಪಟ್ಟ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಪದಚ್ಯುತಗೊಳಿಸಲು 3 ಮಸೂದೆಗಳನ್ನು ಸರ್ಕಾರ ಮಂಡಿಸಿದ ಬೆನ್ನಲ್ಲೇ ಈ ವರದಿ ಬಂದಿದೆ.10 ಅಥವಾ ಶೇ.33 ರಷ್ಟು ಮುಖ್ಯಮಂತ್ರಿಗಳು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ, ಇದರಲ್ಲಿ ಕೊಲೆ ಯತ್ನ, ಅಪಹರಣ, ಲಂಚ ಮತ್ತು ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದ ಪ್ರಕರಣಗಳು ಸೇರಿವೆ.

ರಾಜ್ಯ ವಿಧಾನಸಭೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 30 ಹಾಲಿ ಸಿಎಂಗಳ ಸ್ವ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ ವರದಿ ಸಿದ್ಧಪಡಿಸಲಾಗಿದೆ.

PREV
Read more Articles on

Recommended Stories

ಬಿಹಾರದಲ್ಲಿ ಏಷ್ಯಾದ ಅತಿ ಅಗಲದ 6 ಲೇನ್‌ ಸೇತುವೆ : 34 ಮೀ. ಅಗಲ
ಆಯ್ಕೆ ಸಮಿತಿಗೆ ಹೊಸ ಸದಸ್ಯರ ಹುಡುಕಾಟ ಆರಂಭಿಸಿದ ಬಿಸಿಸಿಐ