ಮೋದಿ ಪ್ರಧಾನ ಕಾರ್‍ಯದರ್ಶಿ: ಪಿ.ಕೆ.ಮಿಶ್ರಾಗೆ ಮರಳಿ ಹುದ್ದೆ

KannadaprabhaNewsNetwork |  
Published : Jun 14, 2024, 01:01 AM ISTUpdated : Jun 14, 2024, 04:51 AM IST
Bollywood Celebs Congratulate Narendra Modi

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಕೆ. ಮಿಶ್ರಾ ಅವರನ್ನು ಪುನರ್‌ ನೇಮಕ ಮಾಡಲಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಕೆ. ಮಿಶ್ರಾ ಅವರನ್ನು ಪುನರ್‌ ನೇಮಕ ಮಾಡಲಾಗಿದೆ. ಹೀಗಾಗಿ ಮಿಶ್ರಾ ಅವರು ತಮ್ಮ ಅಧಿಕಾರ ಮುಂದುವರಿಸಲಿದ್ದಾರೆ. 

ಡಾ.ಪಿ.ಕೆ. ಶರ್ಮ ಅವರು 1972ರ ಸಾಲಿನ ಐಎಎಸ್‌ ಅಧಿಕಾರಿಯಾಗಿದ್ದು, ಇವರು ಗುಜರಾತ್‌ ವಿದ್ಯುತ್‌ ನಿಯಂತ್ರಣಾ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸದ್ದರು. ಜೊತೆಗೆ ಕೇಂದ್ರ ಕೃಷಿ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸದ್ದರು. 2019ರಿಂದ ಇವರು ಪ್ರಧಾನ ಮಂತ್ರಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಇವರ ಮುಂದಿನ ಅವಧಿಯು ಪ್ರಧಾನಿ ಮೋದಿ ಅವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಇರುತ್ತದೆ.

==

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್‌ ದೋವಲ್‌ ಮರು ನೇಮಕ

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಸ್ಪೈಮಾಸ್ಟರ್‌ ಅಜಿತ್‌ ದೋವಲ್‌ ಅವರು ಗುರುವಾರ ಮರು ನೇಮಕಗೊಂಡಿದ್ದಾರೆ. ಜೂ.10 ರಿಂದಲೇ ಜಾರಿಗೆ ಬರುವಂತೆ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಛತ್ತೀಸ್‌ಗಢ ಮದ್ಯ ಹಗರಣ: ಮಾಜಿ ಸಿಎಂ ಪುತ್ರಗೆ ₹250 ಕೋಟಿ ಲಂಚ
ಚೀನಿಯರಿಗೆ ಅಕ್ರಮ ವೀಸಾಕೇಸಲ್ಲಿ ಚಿದು ಪುತ್ರಗೆ ಸಂಕಷ್ಟ