ಭಾರತದ ‘ಜಲ ಶಸ್ತ್ರೀಕರಣ’ : ಶೆಹಬಾಜ್ ಷರೀಫ್ ಕಿಡಿ

KannadaprabhaNewsNetwork |  
Published : May 31, 2025, 01:32 AM ISTUpdated : May 31, 2025, 04:25 AM IST
Pakistan Prime Minister Shehbaz Sharif (File photo/ Reuters)

ಸಾರಾಂಶ

ಪಹಲ್ಗಾಂ ಉಗ್ರ ದಾಳಿ ಬಳಿಕ ಸಿಂಧೂ ಜಲ ಒಪ್ಪಂದವನ್ನು ತಡೆಹಿಡಿದಿರುವ ಭಾರತದ ಕ್ರಮದ ವಿರುದ್ಧ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತೆ ಆಕ್ರೋಶ ಹೊರಹಾಕಿದ್ದಾರೆ. ನೀರನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಭಾರತದ ಯೋಜನೆಯನ್ನು ಯಶಸ್ವಿಯಾಗಲು ಬಿಡುವುದಿಲ್ಲ ಎಂದಿದ್ದಾರೆ.

ಇಸ್ಲಾಮಾಬಾದ್: ಪಹಲ್ಗಾಂ ಉಗ್ರ ದಾಳಿ ಬಳಿಕ ಸಿಂಧೂ ಜಲ ಒಪ್ಪಂದವನ್ನು ತಡೆಹಿಡಿದಿರುವ ಭಾರತದ ಕ್ರಮದ ವಿರುದ್ಧ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತೆ ಆಕ್ರೋಶ ಹೊರಹಾಕಿದ್ದಾರೆ. ನೀರನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಭಾರತದ ಯೋಜನೆಯನ್ನು ಯಶಸ್ವಿಯಾಗಲು ಬಿಡುವುದಿಲ್ಲ ಎಂದಿದ್ದಾರೆ.

ತಜಕಿಸ್ತಾನದ ರಾಜಧಾನಿ ದುಶಾಂಬೆಯಲ್ಲಿ ನಡೆದ 3 ದಿನಗಳ ಅಂತಾರಾಷ್ಟ್ರೀಯ ಹಿಮನದಿಗಳ ಸಂರಕ್ಷಣೆ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಸಿಂಧೂ ಜಲ ಒಪ್ಪಂದವನ್ನು ಭಾರತ ಸ್ಥಗಿತಗೊಳಿಸಿರುವುದು ತೀವ್ರ ವಿಷಾದಕರ. ರಾಜಕೀಯ ಲಾಭಕ್ಕಾಗಿ ಲಕ್ಷಾಂತರ ಜೀವಗಳನ್ನು ಒತ್ತೆಯಾಳುಗಳಾಗಿ ಇಡಬಾರದು. 

ಪಾಕಿಸ್ತಾನ ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದರು.‘ಗಾಜಾದಲ್ಲಿ ಸಾಂಪ್ರದಾಯಿಕ ಶಸ್ತ್ರಾಸ್ತ್ರಗಳ ಬಳಕೆಯಿಂದ ಇಂದು ಜಗತ್ತು ಹೊಸ ಗಾಯಗಳನ್ನು ಅನುಭವಿಸುತ್ತಿದೆ. ಆ ಗಾಯಗಳು ಆಳವಾಗಿವೆ. ಅದು ಸಾಕಾಗಲಿಲ್ಲ ಎಂಬಂತೆ, ನಾವು ಈಗ ಆತಂಕಕಾರಿಯಾದ ಮತ್ತೊಂದು ಸಮಸ್ಯೆಗೆ ಸಾಕ್ಷಿಯಾಗುತ್ತಿದ್ದೇವೆ. ಅದು ನೀರಿನ ಶಸ್ತ್ರಾಸ್ತ್ರೀಕರಣ’ ಎಂದು ಭಾರತದ ವಿರುದ್ಧ ಕಿಡಿ ಕಾರಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ