ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಪಾಕಿಸ್ತಾನದ ಶೆಹಬಾಜ್ ಷರೀಫ್ ಸರ್ಕಾರವು ತನ್ನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ಬದಲಿಸಲು ನಿರ್ಧರಿಸಿದೆ
ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಪಾಕಿಸ್ತಾನದ ಶೆಹಬಾಜ್ ಷರೀಫ್ ಸರ್ಕಾರವು ತನ್ನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ಬದಲಿಸಲು ನಿರ್ಧರಿಸಿದೆ ಹಾಗೂ ಅವರನ್ನು ಬಂಧನದಲ್ಲಿ ಇರಿಸಿದೆ ಎಂದು ತಿಳಿದುಬಂದಿದೆ ಹಾಗೂ ಅವರ ಬದಲಿಗೆ ಸಾಹಿರ್ ಶಂಶಾದ್ ಮಿರ್ಜಾ ಅವರನ್ನು ನೇಮಿಸುವ ಸಾಧ್ಯತೆಯಿದೆ.
ಪಾಕಿಸ್ತಾನ ಸೇನಾ ಮುಖ್ಯಸ್ಥರು ಇತ್ತೀಚೆಗೆ ಕಾಶ್ಮೀರವು ಪಾಕ್‌ನ ಕಂಠನಾಳ ಎಂದಿದ್ದರು. ಅವರ ಈ ಹೇಳಿಕೆಯೇ ಪಾಕಿಸ್ತಾನಿ ಉಗ್ರರು ಪಹಲ್ಗಾಂ ಮೇಲೆ ದಾಳಿ ನಡೆಸಲು ಕಾರಣವಾಯಿತು ಎಂದು ಹೇಳಲಾಗಿತ್ತು. ಆದರೆ ಇತ್ತೀಚಿನ ಭಾರತದ ಆಪರೇಶನ್ ಸಿಂದೂರ ದಾಳಿಯನ್ನು ಹಿಮ್ಮೆಟ್ಟಿಸಲು ಅವರು ವಿಫಲರಾದರು ಎಂಬ ಆಕ್ರೋಶ ಪಾಕಿಸ್ತಾನದಲ್ಲಿ ನೆಲೆಸಿದೆ. ಹೀಗಾಗಿ ಅವರನ್ನು ಬಂಧಿಸಿ ಪದಚ್ಯುತಿ ಮಾಡಲಾಗಿದೆ ಎನ್ನಲಾಗಿದೆ.