ಪಾಕ್‌ ವಿಫಲ ದೇಶ, ಬಡ ರಾಷ್ಟ್ರ : ಓವೈಸಿ ವ್ಯಂಗ್ಯ

KannadaprabhaNewsNetwork |  
Published : May 05, 2025, 12:51 AM ISTUpdated : May 05, 2025, 06:40 AM IST
Pahalgam Attack: Owaisi Stands With Government | Demands Swift Action

ಸಾರಾಂಶ

ಪಹಲ್ಗಾಂ ನರಮೇಧದ ಬಳಿಕ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಮತ್ತೆ ನೆರೆಯ ರಾಷ್ಟ್ರದ ವಿರುದ್ಧ ಕಿಡಿ  

ನವದೆಹಲಿ: ಪಹಲ್ಗಾಂ ನರಮೇಧದ ಬಳಿಕ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಮತ್ತೆ ನೆರೆಯ ರಾಷ್ಟ್ರದ ವಿರುದ್ಧ ಕಿಡಿ ಕಾರಿದ್ದು, ಪಾಕಿಸ್ತಾನದಲ್ಲಿ ಅಸಂಬದ್ಧವಾಗಿ ಮಾತನಾಡುವವರಿಗೆ ಇಸ್ಲಾಂ ಗೊತ್ತಿಲ್ಲ. ಪಾಕ್‌ ಒಂದು ವಿಫಲ ದೇಶ ಎಂದಿದ್ದಾರೆ.

ಇತ್ತೀಚೆಗೆ ‘ಕಾಶ್ಮೀರವು ನಮ್ಮ ಕಂಠನಾಳ. ಅದನ್ನು ಪಡೆದೇ ತೀರುತ್ತೇವೆ’ ಎಂಬ ಪಾಕ್‌ ಸೇನಾ ಮುಖ್ಯಸ್ಥ ಜನರಲ್ ಆಸೀಮ್ ಮುನೀರ್‌ ಅವರ ಹೇಳಿಕೆಗೆ ಹಾರಿಹಾಯ್ದ ಒವೈಸಿ, ‘ಪಾಕಿಸ್ತಾನದಲ್ಲಿ ಅಸಂಬದ್ಧವಾಗಿ ಮಾತನಾಡುವವರಿಗೆ ಇಸ್ಲಾಂ ಗೊತ್ತಿಲ್ಲ.

 ನೀವು (ಮುನೀರ್‌) ಜನರನ್ನು ಮಹಾಜಿರ್‌, ಪಠಾಣ್‌ಗಳು ಎಂದು ಕರೆಯುವ ದೇಶದಲ್ಲಿದ್ದೀರಿ, ನಿಮ್ಮ ದೇಶವು ತುಂಬಾ ಬಡವಾಗಿದೆ. ಜನರು ಚಿಂತಿತರಾಗಿದ್ದಾರೆ. ನಿಮಗೆ ಅಪ್ಘಾನಿಸ್ತಾನದೊಂದಿಗೆ ಭಿನ್ನಾಭಿಪ್ರಾಯಗಳಿವೆ. ಇರಾನ್‌ನೊಂದಿಗೆ ಗಡಿ ವಿವಾದವಿದೆ. ಹೀಗಾಗಿ ಪಾಕಿಸ್ತಾನ ವಿಫಲ ರಾಷ್ಟ್ರವಾಗಿದೆ’ ಎಂದು ತಿರುಗೇಟು ನೀಡಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ಮರುಭೂಮಿ ಸೌದಿಯಲ್ಲಿ ಹಿಮಪಾತ, ಮಳೆ!