ಯುಪಿಎ ಸರ್ಕಾರದ ಆರ್ಥಿಕ ಅವ್ಯವಸ್ಥೆ ಬಗ್ಗೆ ಶ್ವೇತಪತ್ರ!

KannadaprabhaNewsNetwork | Updated : Feb 07 2024, 08:37 AM IST

ಸಾರಾಂಶ

ಯುಪಿಎ ಸರ್ಕಾರದ ಆರ್ಥಿಕ ವ್ಯವಸ್ಥೆಯ ಕುರಿತು ಶ್ವೇತಪತ್ರ ಹೊರಡಿಸುವುದಕ್ಕಾಗಿಯೇ ಸಂಸತ್‌ ಕಲಾಪ ಒಂದು ದಿನ ವಿಸ್ತರಣೆ ಮಾಡಲಾಗಿದೆ.

ನವದೆಹಲಿ: ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿರುವ ಆರ್ಥಿಕ ಅವ್ಯವಸ್ಥೆಯ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಲು ಸಿದ್ಧತೆ ನಡೆಸಿದೆ. ಇದಕ್ಕಾಗಿಯೇ ಸಂಸತ್‌ ಕಲಾಪವನ್ನು ಒಂದು ದಿನ ವಿಸ್ತರಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 

ಮಂಗಳವಾರವಷ್ಟೇ ಕೇಂದ್ರ ಸರ್ಕಾರ ಬಜೆಟ್‌ ಅಧಿವೇಶನವನ್ನು ಶುಕ್ರವಾರದ ಬದಲಾಗಿ ಶನಿವಾರ ಅಂತ್ಯಗೊಳಿಸುವುದಾಗಿ ಪ್ರಕಟಿಸಿತ್ತು.

2004ರಿಂದ 2014ರವರೆಗೆ ಆಡಳಿತ ನಡೆಸಿದ ಯುಪಿಎ ಸರ್ಕಾರದ ಅವಧಿಯಲ್ಲಾದ ಆರ್ಥಿಕ ಅವ್ಯವಸ್ಥೆ ಮತ್ತು ಆರ್ಥಿಕತೆಯ ಮೇಲೆ ಇದರ ಪರಿಣಾಮದ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ಈ ಶ್ವೇತಪತ್ರ ಒಳಗೊಂಡಿರಲಿದೆ. 

ಅಲ್ಲದೇ ಇದನ್ನು ಸರಿಮಾಡಲು ಎನ್‌ಡಿಎ ಸರ್ಕಾರ ತೆಗೆದುಕೊಂಡ ನಿರ್ಧಾರಗಳನ್ನು ಇದು ಒಳಗೊಂಡಿರಲಿದೆ ಎಂದು ವರದಿ ತಿಳಿಸಿದೆ.ಯುಪಿಎ ಆರ್ಥಿಕ ಅವ್ಯವಸ್ಥೆಯ ಬಗ್ಗೆ ಶೀಘ್ರ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್‌ ಭಾಷಣದಲ್ಲಿ ಹೇಳಿದ್ದರು.

Share this article