ಕರ್ನಾಟಕದಲ್ಲಿನ ಮುಸ್ಲಿಂ ಮೀಸಲು ಇಸ್ಲಾಮೀಕರಣದ ಭಾಗ: ಯೋಗಿ ಕಿಡಿ

ಸಾರಾಂಶ

ಒಬಿಸಿ ಕೋಟಾದಲ್ಲಿ ಮುಸ್ಲಿಮರಿಗೆ ಮೀಸಲು ನೀಡುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಪ್ರಯತ್ನವು ದೇಶವನ್ನು ಇಸ್ಲಾಮೀಕರಣ ಮಾಡುವ ಮತ್ತು ವಿಜಭನೆ ಮಾಡುವ ಅಜೆಂಡಾದ ಭಾಗವಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗಂಭೀರ ಆರೋಪ ಮಾಡಿದ್ದಾರೆ.

ಲಖನೌ: ಒಬಿಸಿ ಕೋಟಾದಲ್ಲಿ ಮುಸ್ಲಿಮರಿಗೆ ಮೀಸಲು ನೀಡುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಪ್ರಯತ್ನವು ದೇಶವನ್ನು ಇಸ್ಲಾಮೀಕರಣ ಮಾಡುವ ಮತ್ತು ವಿಜಭನೆ ಮಾಡುವ ಅಜೆಂಡಾದ ಭಾಗವಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗಂಭೀರ ಆರೋಪ ಮಾಡಿದ್ದಾರೆ.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯೋಗಿ, ‘ಕರ್ನಾಟಕದಲ್ಲಿ ಏನಾಗಿದೆಯೇ ಅದು ದುರದೃಷ್ಟಕರ. ಕಾಂಗ್ರೆಸ್‌ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿಗಳು ಮತ್ತು ಹಿಂದುಳಿದ ಸಮುದಾಯದವರ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತದೆ. ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ ನೀಡುವ ಯತ್ನವು ದೇಶವನ್ನು ಇಸ್ಲಾಮೀಕರಣ ಮಾಡುವ ಅಜೆಂಡಾದ ಭಾಗವಾಗಿದೆ. ಈ ಬಗ್ಗೆ ಮತದಾರರು ಎಚ್ಚೆತ್ತುಕೊಳ್ಳಬೇಕು’ ಎಂದು ಕರೆ ನೀಡಿದರು.

ಜೊತೆಗೆ ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ರಚನೆಯಾಗಿದ್ದ ನ್ಯಾ. ರಂಗನಾಥ್‌ ಮಿಶ್ರಾ ಆಯೋಗ, ಸಾಚಾರ್‌ ಆಯೋಗ ಕೂಡ ಹೀಗೆ ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ ನೀಡುವ ಶಿಫಾರಸು ಮಾಡಿದ್ದವು. ಆಗ ಕೂಡ ಬಿಜೆಪಿ ಇದರ ವಿರುದ್ಧ ದೊಡ್ಡ ಹೋರಾಟ ನಡೆಸಿತ್ತು ಎಂದು ಸಿಎಂ ಯೋಗಿ ಹೇಳಿದರು.

Share this article