ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ: ಡಾ. ಸಿದ್ದರಾಮಣ್ಣ

KannadaprabhaNewsNetwork |  
Published : Nov 08, 2026, 01:15 AM IST
0000 | Kannada Prabha

ಸಾರಾಂಶ

ಮಕ್ಕಳು ಓದಿನ ಅಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ, ಸೋಲು-ಗೆಲುವು ಮುಖ್ಯವಲ್ಲ. ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರಯತ್ನ ಮಾಡುವುದೇ ಬಹುಮಾನ ಪಡೆದಂತೆ. ಅದನ್ನು ನಿರಂತರವಾಗಿ ಅಳವಡಿಸಿಕೊಂಡಾಗ ಹೆಚ್ಚಿನ ಅವಕಾಶಗಳು ಸಿಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ.ಎಸ್.ಸಿದ್ದರಾಮಣ್ಣ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಮಕ್ಕಳು ಓದಿನ ಅಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ, ಸೋಲು-ಗೆಲುವು ಮುಖ್ಯವಲ್ಲ. ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರಯತ್ನ ಮಾಡುವುದೇ ಬಹುಮಾನ ಪಡೆದಂತೆ. ಅದನ್ನು ನಿರಂತರವಾಗಿ ಅಳವಡಿಸಿಕೊಂಡಾಗ ಹೆಚ್ಚಿನ ಅವಕಾಶಗಳು ಸಿಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ.ಎಸ್.ಸಿದ್ದರಾಮಣ್ಣ ತಿಳಿಸಿದರು.

ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆಗಳ ಸಹಭಾಗಿತ್ವದಲ್ಲಿ ಶುಕ್ರವಾರ ಜಿಲ್ಲಾ ಬಾಲಭವನದಲ್ಲಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲಾ ಬಾಲಭವನವು ನಿರಂತರವಾಗಿ ಮಕ್ಕಳ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಎಲ್ಲಾ ಮಕ್ಕಳು ಇದರ ಸದುಪಯೋಗ ಮಾಡಿಕೊಳ್ಳಬೇಕು. ತಂದೆ - ತಾಯಿ ಮಕ್ಕಳ ಭವಿಷ್ಯದ ಬಗ್ಗೆ ಕನಸನ್ನು ಕಂಡಿರುತ್ತಾರೆ. ಅದನ್ನು ಪೂರೈಸಲು ಮಕ್ಕಳು ನಿರಂತರವಾಗಿ ಶ್ರಮಿಸಬೇಕೆಂದು ಹೇಳಿದರು.

ಜಿಲ್ಲಾ ಮಟ್ಟದಲ್ಲಿ 9 ರಿಂದ 16 ವಯೋಮಾನದ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳಾದ ಸೃಜನಾತ್ಮಕ ಕಲೆ/ಸೃಜನಾತ್ಮಕ ಬರವಣಿಗೆ/ಸೃಜನಾತ್ಮಕ ಪ್ರದರ್ಶನ ಕಲೆ/ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆ ಹಾಗೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕಿನಲ್ಲಿ ಸಕಾರಾತ್ಮಕ ಬೆಳವಣಿಗೆ ಕುರಿತು ಭಾಷಣ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಜಿಲ್ಲಾ ಬಾಲಭವನದಲ್ಲಿ ವೇದಿಕೆಯನ್ನು ಕಲ್ಪಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವನ್ನು ಮಾಡಿಕೊಡುವುದು ಪೋಷಕರ ಜವಬ್ದಾರಿಯಾಗಿರುತ್ತದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅಂಬಿಕಾ ಮಾತನಾಡುತ್ತಾ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಇಂದು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಶಿಕ್ಷಣದ ಜೊತೆಗೆ ಮಕ್ಕಳಿಗೆ ಇತರೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿಕೊಡುವುದಾಗಿದೆ. ಇಂತಹ ಸ್ಪರ್ಧೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅದರ ಸದುಪಯೋಗ ಪಡಿಸಿಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳನ್ನು ರಾಜ್ಯ ಬಾಲಭವನ ಸೊಸೈಟಿ, ಬೆಂಗಳೂರಿನಲ್ಲಿ ನಡೆಯುವ ಕಲಾಶ್ರೀ ಸ್ಪರ್ಧಾ ಕಾರ್ಯಕ್ರಮಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರಲ್ಲದೆ, ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ವಿಜೇತರಾಗಲು ಪ್ರೋತ್ಸಾಹಿಸಿದರು.

ಈ ಕಾರ್ಯಕ್ರಮದಲ್ಲಿ ಸೃಜನಾತ್ಮಕ ಕಲೆಯ ತೀರ್ಪುಗಾರರಾದ ಸೌಮ್ಯ, ವಿಶಾಲಾಕ್ಷಿ, ಸೃಜನಾತ್ಮಕ ಬರವಣಿಗೆಯ ತೀರ್ಪುಗಾರರಾದ ಭಾಗ್ಯಶ್ರೀ, ಇಂದಿರಮ್ಮ, ಸೃಜನಾತ್ಮಕ ಪ್ರದರ್ಶನ ಕಲೆಯ ತೀರ್ಪುಗಾರರಾದ ಪವಿತ್ರ ಎನ್, ಸ್ವಾತಿ ಬರಗೂರು, ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಯ ತೀರ್ಪುಗಾರರಾದ ಮಮತ ಎಂ., ರವಿಶಂಕರ್ ಎಸ್., ಭಾಷಣ ಸ್ಪರ್ಧೆಗೆ ಶಶಿಧರ್, ರಂಗನಾಥ್ ಹಾಗೂ ವ್ಯವಸ್ಥಾಪಕ ಚಿದಾನಂದಮೂರ್ತಿ, ಕಾರ್ಯಕ್ರಮ ಸಂಯೋಜಕಿ ಮಮತ ಪಿ., ಕಾರ್ಯಕ್ರಮ ಸಹಾಯಕಿ ಶಿಲ್ಪ ಜಿ.ಎಸ್, ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಮಕ್ಕಳು, ಶಿಕ್ಷಕರು ಮತ್ತು ಪೋಷಕರು ಹಾಜರಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಉ.ಖಂಡ ಸಚಿವೆ ರೇಖಾ ಹತ್ಯೆ ಯತ್ನ ಕೇಸ್‌: 3 ವಾರ ಬಳಿಕ ಪತಿ ಸೆರೆ
ಅಯೋಧ್ಯೆಯಲ್ಲಿ 36 ಲಕ್ಷ ಜ್ಯೋತಿ ಬೆಳಗಿ ದೀಪೋತ್ಸವ: ದಾಖಲೆ