ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಲ್ಲಿ ಪೇಟಿಎಂ ಪೇಮೆಂಟ್ ಬ್ಯಾಂಕ್ ಕೆಲವು ಲೋಪದೋಷಗಳನ್ನು ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅದರ ಕೆಲವು ಹಿರಿಯ ಅಧಿಕಾರಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಮಹತ್ವದ ದಾಖಲೆಗಳನ್ನೂ ಸಹ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದ್ದು, ಮತ್ತಷ್ಟು ದಾಖಲೆಗಳನ್ನು ನೀಡುವಂತೆ ಕೇಳಲಾಗಿದೆ. ದಾಖಲೆಗಳ ಪರಿಶೀಲನೆ ವೇಳೆ ಅಕ್ರಮಗಳು ಕಂಡುಬಂದಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.