ಪಿತ್ರೋಡಾ ವರ್ಣದ್ವೇಷ ಹೇಳಿಕೆ ಮೂರ್ಖತನದ್ದು: ರಾಬರ್ಟ್‌ ವಾದ್ರಾ ಟೀಕೆ

KannadaprabhaNewsNetwork |  
Published : May 10, 2024, 01:37 AM ISTUpdated : May 10, 2024, 06:09 AM IST
ವಾದ್ರಾ | Kannada Prabha

ಸಾರಾಂಶ

ಭಾರತೀಯರ ಚರ್ಮದ ಬಣ್ಣ ಕುರಿತ ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಮಾಜಿ ಮುಖ್ಯಸ್ಥ ಸ್ಯಾಮ್‌ ಪಿತ್ರೋಡಾ ಹೇಳಿಕೆ ಮೂರ್ಖತನದ್ದು ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್‌ ವಾದ್ರಾ ಟೀಕಿಸಿದ್ದಾರೆ

ನವದೆಹಲಿ: ಭಾರತೀಯರ ಚರ್ಮದ ಬಣ್ಣ ಕುರಿತ ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಮಾಜಿ ಮುಖ್ಯಸ್ಥ ಸ್ಯಾಮ್‌ ಪಿತ್ರೋಡಾ ಹೇಳಿಕೆ ಮೂರ್ಖತನದ್ದು ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್‌ ವಾದ್ರಾ ಟೀಕಿಸಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಒಬ್ಬ ವಿದ್ಯಾವಂತ, ಜವಬ್ದಾರಿಯುತ ವ್ಯಕ್ತಿ ಒಂದು ಉನ್ನತ ಸ್ಥಾನದಲ್ಲಿ ಇದ್ದುಕೊಂಡು ಈ ತರಹದ ಹೇಳಿಕೆಗಳನ್ನು ಹೇಗೆ ನೀಡುತ್ತಾರೆ. 

ಈ ತರಹದ ಹೇಳಿಕೆಗಳಿಂದ ಪಕ್ಷಕ್ಕೆ ಎದುರಾಗುವ ಸಮಸ್ಯೆಗಳ ಬಗ್ಗೆ ಯೋಚಿಸಬೇಕೆಲ್ಲವೇ. ಈ ಹೇಳಿಕೆಗಳನ್ನೇ ಬಿಜೆಪಿ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಾರೆ. ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರು ಕಾಂಗ್ರೆಸ್‌ ಪಕ್ಷದ ಏಳಿಗೆಗಾಗಿ ಹಗಲಿರುಳು ಎನ್ನದೇ ಶ್ರಮಿಸುತ್ತಿದ್ದಾರೆ ಎಂಬ ಅರಿವಿಲ್ಲವೇ ಇವರಿಗೆ ಎಂದು ಗುಡುಗಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇರಾನ್‌ ಸೋಲೊಪ್ಪದ ಸಾಹಸದ ಹಿಂದೆ ‘ಜಾಫರಿ’ ತಂತ್ರ!
ಇರಾನ್‌ ಶರಣಾಗತಿ ಸನ್ನಿಹಿತ: ಟ್ರಂಪ್‌