ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಪ್ರಧಾನಿ ನರೇಂದ್ರ ಮೋದಿ ಒತ್ತು

KannadaprabhaNewsNetwork |  
Published : Sep 01, 2024, 01:56 AM ISTUpdated : Sep 01, 2024, 04:40 AM IST
PM Modi

ಸಾರಾಂಶ

ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣಗಳಲ್ಲಿ ನ್ಯಾಯಾಂಗವು ತ್ವರಿತವಾಗಿ ತೀರ್ಪು ನೀಡಿದರೆ ಮಹಿಳೆಯರಲ್ಲಿ ಸುರಕ್ಷತಾ ಭಾವನೆ ಹೆಚ್ಚಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.  

ನವದೆಹಲಿ:  ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣಗಳನ್ನು ನ್ಯಾಯಾಂಗವು ತ್ವರಿತವಾಗಿ ಇತ್ಯರ್ಥಪಡಿಸಿದರೆ ಮಹಿಳೆಯರಲ್ಲಿ ಹೆಚ್ಚಿನ ಸುರಕ್ಷತಾ ಭಾವನೆ ಮೂಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಕೋಲ್ಕತಾದಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯಗಳು ಹಾಗೂ ಮಕ್ಕಳನ್ನು ಗುರಿಯಾಗಿಸಿ ನಡೆಯುವ ಅಪರಾಧ ಪ್ರಕರಣಗಳು ಅತ್ಯಂತ ಕಳವಳಕಾರಿ ಸಂಗತಿಗಳಾಗಿವೆ. ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯಗಳು ತ್ವರಿತವಾಗಿ ತೀರ್ಪುಗಳನ್ನು ನೀಡಿದರೆ ದೇಶದ ಅರ್ಧದಷ್ಟು ಜನಸಂಖ್ಯೆಗೆ ತಮ್ಮ ಸುರಕ್ಷತೆಯ ಬಗ್ಗೆ ಆತ್ಮವಿಶ್ವಾಸ ಮೂಡುತ್ತದೆ ಎಂದು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರ ಉಪಸ್ಥಿತಿಯಲ್ಲಿ ಶನಿವಾರ ಜಿಲ್ಲಾ ನ್ಯಾಯಾಧೀಶರ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧ ಕೃತ್ಯಗಳನ್ನು ತಡೆಯಲು ಸಾಕಷ್ಟು ಕಠಿಣ ಕಾಯ್ದೆಗಳನ್ನು ತರಲಾಗಿದೆ. 2019ರಲ್ಲೇ ಈ ಕೇಸುಗಳ ಇತ್ಯರ್ಥಕ್ಕೆ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಅವುಗಳ ಮೂಲಕ ನ್ಯಾಯ ಸಿಗುವಂತಾಗಲು ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯ ಜೊತೆಗೆ ಸಮನ್ವಯದ ಅಗತ್ಯವಿದೆ ಎಂದು ಹೇಳಿದರು.

ಸಂವಿಧಾನದ ರಕ್ಷಕ ನ್ಯಾಯಾಂಗ:

ನ್ಯಾಯಾಂಗವನ್ನು ಸಂವಿಧಾನದ ರಕ್ಷಕ ಎಂದು ಗೌರವಿಸಲಾಗುತ್ತದೆ. ನಮ್ಮ ದೇಶದ ಸುಪ್ರೀಂಕೋರ್ಟ್‌ ಯಾವತ್ತೂ ಈ ಜವಾಬ್ದಾರಿಯನ್ನು ಪಾಲಿಸಿದೆ. ಆದ್ದರಿಂದಲೇ ಭಾರತೀಯರು ಯಾವತ್ತೂ ಸುಪ್ರೀಂಕೋರ್ಟ್‌ನಲ್ಲಿ ಅಪನಂಬಿಕೆಯನ್ನು ವ್ಯಕ್ತಪಡಿಸಿಲ್ಲ. ತುರ್ತುಸ್ಥಿತಿಯಂತಹ ಸಮಯದಲ್ಲೂ ಜನರ ಹಕ್ಕುಗಳನ್ನು ರಕ್ಷಿಸುವ ಕಾರ್ಯವನ್ನು ನ್ಯಾಯಾಂಗ ಮಾಡಿದೆ ಎಂದು ಮೋದಿ ಶ್ಲಾಘಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಣಾಗೆ ಏಮ್ಸ್‌ನಲ್ಲಿ ದಯಾಮರಣ ಪ್ರಕ್ರಿಯೆ ಆರಂಭ
‘ಒನ್‌ ಬ್ಯಾಟಲ್‌ ಆಫ್ಟರ್‌ ಅನದರ್‌’ಗೆ ‘ಅತ್ಯುತ್ತಮ ಚಿತ್ರ’ ಆಸ್ಕರ್‌ ಗೌರವ