ಮುಕ್ತ ವ್ಯಾಪಾರ ಚರ್ಚೆ ತಾರ್ಕಿಕ ಅಂತ್ಯಕ್ಕೆ: ಮೋದಿ-ಸ್ಟಾರ್ಮರ್‌ ಸಮ್ಮತಿ

KannadaprabhaNewsNetwork |  
Published : Jul 07, 2024, 01:26 AM ISTUpdated : Jul 07, 2024, 05:40 AM IST
uk election

ಸಾರಾಂಶ

ಬ್ರಿಟನ್‌ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಲೇಬರ್‌ ಪಕ್ಷದ ನಾಯಕ ಕೀರ್‌ ಸ್ಟಾರ್ಮರ್‌ಗೆ ದೂರವಾಣಿ ಕರೆ ಮಾಡಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ನವದೆಹಲಿ: ಬ್ರಿಟನ್‌ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಲೇಬರ್‌ ಪಕ್ಷದ ನಾಯಕ ಕೀರ್‌ ಸ್ಟಾರ್ಮರ್‌ಗೆ ದೂರವಾಣಿ ಕರೆ ಮಾಡಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಇದೇ ವೇಳೆ ಬಹಳ ಸಮಯದಿಂದ ಬಾಕಿ ಉಳಿದಿರುವ ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಕುರಿತ ಮಾತುಕತೆ ಮುಂದುವರಿಸಿ ತಾರ್ಕಿಕ ಅಂತ್ಯಕ್ಕೆ ಒಯ್ಯಲು ಉಭಯ ನಾಯಕರು ಸಮ್ಮತಿಸಿದ್ದಾರೆ.

ಮಾತುಕತೆ ವೇಳೆ ಇಬ್ಬರೂ ನಾಯಕರು ಉಭಯ ದೇಶಗಳ ನಡುವಿನ ಸುದೀರ್ಘ ಸಂಬಂಧವನ್ನು ಮೆಲುಕು ಹಾಕುವ ಜೊತೆಗೆ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯನ್ನು ಇನ್ನುಷ್ಟು ಆಳಕ್ಕೆ ಕೊಂಡೊಯ್ಯುವ ಮತ್ತು ಇನ್ನಷ್ಟು ಮುಂದುವರೆಸುವ ಆಶಯ ವ್ಯಕ್ತಪಡಿಸಿದರು.

ಇದೇ ವೇಳೆ ಬ್ರಿಟನ್‌ನ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಬೆಳವಣಿಗೆಯಲ್ಲಿ ಭಾರತೀಯ ಸಮುದಾಯದ ಪಾತ್ರದ ಬಗ್ಗೆ ಸ್ಟಾರ್ಮರ್‌ ಮೆಚ್ಚುಗೆ ವ್ಯಕ್ತಪಡಿಸಿದರು. ಮತ್ತೊಂದೆಡೆ ಆದಷ್ಟು ಶೀಘ್ರವೇ ಭಾರತಕ್ಕೆ ಭೇಟಿ ನೀಡುವಂತೆ ಬ್ರಿಟನ್‌ ಪ್ರಧಾನಿಗೆ ಮೋದಿ ಆಹ್ವಾನ ನೀಡಿದರು.

ಗುರುವಾರ ನಡೆದ ಬ್ರಿಟನ್‌ ಸಂಸತ್‌ ಚುನಾವಣೆಯಲ್ಲಿ ಹಿಂದಿನ ಪ್ರಧಾನಿ ರಿಷಿ ಸುನಕ್‌ ಅವರ ಟೋರಿ ಪಕ್ಷ ಹೀನಾಯ ಸೋಲು ಕಂಡಿತ್ತು ಹಾಗೂ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷ ಜಯಭೇರಿ ಬಾರಿಸಿತ್ತು.

22 ವರ್ಷದ ಯುವಕ ಬ್ರಿಟನ್‌ ಸಂಸತ್ತಿಗೆ ಆಯ್ಕೆ: ಅತಿ ಕಿರಿಯ!

ಲಂಡನ್‌: ಕೇವಲ 22 ವರ್ಷ ವಯಸ್ಸಿನ ಲೇಬರ್ ಪಕ್ಷದ ಅಭ್ಯರ್ಥಿ ಸ್ಯಾಮ್ ಕಾರ್ಲಿಂಗ್ ಅವರು ನಾರ್ತ್ ವೆಸ್ಟ್ ಕೇಂಬ್ರಿಡ್ಜ್‌ಶೈರ್‌ನ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಟನ್‌ ಸಂಸತ್ತಿನ ಅತಿ ಕಿರಿಯ ಎನ್ನಿಸಿಕೊಂಡಿದ್ದಾರೆ.ಅವರು ಅನುಭವಿ ಕನ್ಸರ್ವೇಟಿವ್ ಸಂಸದ ಶೈಲೇಶ್ ವರ ಅವರನ್ನು39 ಮತಗಳ ಅಂತರದಿಂದ ಸೋಲಿಸಿದ್ದಾರೆ.ತನ್ನ ಚಿಕ್ಕ ವಯಸ್ಸಿನ ಹೊರತಾಗಿಯೂ, ಕೇಂಬ್ರಿಡ್ಜ್ ವಿವಿ ವಿಜ್ಞಾನ ಪದವೀಧರ ವಿದ್ಯಾರ್ಥಿಯಾದ ಕಾರ್ಲಿಂಗ್‌ ಅವರನ್ನು ‘ಬೇಬಿ ಆಫ್‌ ದ ಹೌಸ್‌’ ಎಂದು ಬಣ್ಣಿಸಲಾಗಿದೆ.

PREV

Recommended Stories

15 ವರ್ಷ ಬಳಿಕ ಗುಜರಿ ವ್ಯಾಪ್ತಿಗೆಎಲೆಕ್ಟ್ರಿಕ್‌ ವಾಹನಗಳು ಬರಲ್ಲ?
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ