;Resize=(412,232))
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆ.21ರಿಂದ ಮೂರು ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಮೋದಿ ಆ.21ಕ್ಕೆ ಪೋಲೆಂಡ್‌ಗೆ ಮತ್ತು ಆ.23ರಂದು ಯುದ್ಧಪೀಡಿತ ಉಕ್ರೇನ್ ದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.
ಇನ್ನು 1991ರಲ್ಲಿ ಉಕ್ರೇನ್ ಸ್ವಾತಂತ್ರ್ಯ ಪಡೆದ ಬಳಿಕ ಅಲ್ಲಿಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ಎಂಬ ಹಿರಿಮೆಗೂ ಮೋದಿ ಪಾತ್ರರಾಗುತ್ತಿದ್ದಾರೆ. ಜೊತೆಗೆ ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ ಬಳಿಕ ಅಲ್ಲಿಗೆ ಭೇಟಿ ನೀಡುತ್ತಿರುವ ಭಾರತದ ಮೊದಲ ರಾಜಕೀಯ ನಾಯಕರೂ ಹೌದು.