ಪ್ರತಿ ಮನೆಯ್ಲೂ ರಾಷ್ಟ್ರಧ್ವಜ ಹಾರಿಸಿ: ಇನ್‌ಸ್ಟಾದಲ್ಲಿ ಮೋದಿ ಕರೆ

KannadaprabhaNewsNetwork |  
Published : Aug 12, 2026, 04:30 AM IST
ಮೋದಿ  | Kannada Prabha

ಸಾರಾಂಶ

ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಗೌರವ, ಹೆಮ್ಮೆ ಮತ್ತು ವೈಭವದಿಂದ ಆಚರಿಸಿ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರದ ನಿರ್ಮಾಣದ ಪಣ ತೊಡಿ. ಪ್ರತಿ ಮನೆಯ್ಲೂ ರಾಷ್ಟ್ರಧ್ವಜ ಹಾರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ.

ನವದೆಹಲಿ: ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಗೌರವ, ಹೆಮ್ಮೆ ಮತ್ತು ವೈಭವದಿಂದ ಆಚರಿಸಿ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರದ ನಿರ್ಮಾಣದ ಪಣ ತೊಡಿ. ಪ್ರತಿ ಮನೆಯ್ಲೂ ರಾಷ್ಟ್ರಧ್ವಜ ಹಾರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ರೀಲ್ ಹಂಚಿಕೊಂಡಿರುವ ಮೋದಿ, ‘ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸೋಣ ಹಾಗೂ ಅಭಿವೃದ್ಧಿಶೀಲ ಭಾರತಕ್ಕಾಗಿ ಪ್ರತಿಜ್ಞೆ ಮಾಡೋಣ. ಹರ್ ಘರ್ ತಿರಂಗಾ, ಘರ್ ಘರ್ ತಿರಂಗಾ, ಹರ್ ಮನ್ ತಿರಂಗಾ (ಪ್ರತಿ ಮನೆಯಲ್ಲಿ, ಪ್ರತಿ ಹೃದಯದಲ್ಲಿ ತ್ರಿವರ್ಣ ಧ್ವಜ) ಆಚರಿಸೋಣ’ ಎಂದು ಹೇಳಿದ್ದಾರೆ.

ಜತೆಗೆ, ಮೈತ್ರಿಪಕ್ಷಗಳ ಜತೆಗಿನ ಸಾಪ್ತಾಹಿಕ ಸಭೆಗೆ ತಾವು ಆಗಮಿಸಿದ ವೇಳೆ ಸಂಸದರು ಮತ್ತು ಸಚಿವರು ತ್ರಿವರ್ಣ ಧ್ವಜವನ್ನು ಬೀಸುತ್ತಾ ‘ವಂದೇ ಮಾತರಂ’ ಮತ್ತು ‘ಭಾರತ್‌ ಮಾತಾ ಕಿ ಜೈ’ ಘೋಷಣೆಗಳನ್ನು ಕೂಗುತ್ತಿರುವ ತುಣುಕುಗಳನ್ನೂ ಹಂಚಿಕೊಂಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕಾವಡ ಯಾತ್ರೆ : ಹರಿದ್ವಾರದಲ್ಲಿ ಮೂತ್ರ ಬಾಟಲಿ, 7000 ಟನ್‌ ಕಸದ ರಾಶಿ!
ಜೈಲಲ್ಲೇ ಇಮ್ರಾನ್‌ ಸಾವು ಎಂದ ಪತ್ರಕರ್ತ: ಪಾಕ್‌ನಲ್ಲಿ ಸಂಚಲನ