ವಾರಾಣಸಿ ಗ್ಯಾಂಗ್ ರೇಪ್ : ಕಠಿಣ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ

KannadaprabhaNewsNetwork |  
Published : Apr 12, 2025, 12:51 AM ISTUpdated : Apr 12, 2025, 05:01 AM IST
Prime Minister Narendra Modi (File Photo/ANI)

ಸಾರಾಂಶ

ವಾರಾಣಸಿಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಶುಕ್ರವಾರ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಕ್ಷೇತ್ರದಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ವಿಮಾನದ ನಿಲ್ದಾಣದಲ್ಲಿಯೇ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ  ಸೂಚಿಸಿದ್ದಾರೆ.

ವಾರಾಣಸಿ: ವಾರಾಣಸಿಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಶುಕ್ರವಾರ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಕ್ಷೇತ್ರದಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ವಿಮಾನದ ನಿಲ್ದಾಣದಲ್ಲಿಯೇ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಾರಾಣಸಿಯಲ್ಇ ಇತ್ತೀಚೆಗಷ್ಟೇ 19 ವರ್ಷದ ಯುವತಿ ಮೇಲೆ 6 ದಿನ 23 ಜನರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿತ್ತು. ಈ ಸಂಬಂಧ ಪೊಲೀಸರು ಇದುವರೆಗೆ 12 ಆರೋಪಿಗಳನ್ನು ಬಂಧಿಸಿದ್ದಾರೆ.

ವಾರಾಣಸಿಗೆ ಬಂದಿಳಿಯುತ್ತಿದ್ದಂತೆ ಈ ಬಗ್ಗೆ ಮೋದಿ ಅವರು ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿ, ‘ಅಪರಾಧಿಗಳ ವಿರುದ್ಧ ಸಾಧ್ಯವಾದಷ್ಟು ಕಠಿಣ ಕ್ರಮ ಕೈಗೊಳ್ಳಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು’ ಎಂದು ಉತ್ತರ ಪ್ರದೇಶ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ