ಪಾಕ್‌ ಆಕ್ರಮಿತ ಕಾಶ್ಮೀರದಲ್ಲೂಈಗ ಜೆನ್‌ಜೀಗಳ ಪ್ರತಿಭಟನೆ

KannadaprabhaNewsNetwork |  
Published : Nov 07, 2025, 03:30 AM IST
PoK protest

ಸಾರಾಂಶ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ  ಪಾಕ್‌ ಸರ್ಕಾರದ ದುರಾಡಳಿತ, ತಾರತಮ್ಯದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ಶೆಹಬಾಜ್‌ ಷರೀಫ್‌ ಸರ್ಕಾರ ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಮತ್ತೊಂದು ಪ್ರತಿಭಟನೆಯ ಕಹಳೆ ಮೊಳಗಿದೆ.  ಜೆನ್‌ಜೀ ಸಮುದಾಯ ಶೈಕ್ಷಣಿಕ ವ್ಯವಸ್ಥೆ  ಸುಧಾರಣೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಇಸ್ಲಾಮಾಬಾದ್‌: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆದ, ಪಾಕ್‌ ಸರ್ಕಾರದ ದುರಾಡಳಿತ, ತಾರತಮ್ಯದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ಶೆಹಬಾಜ್‌ ಷರೀಫ್‌ ಸರ್ಕಾರ ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಮತ್ತೊಂದು ಪ್ರತಿಭಟನೆಯ ಕಹಳೆ ಮೊಳಗಿದೆ. 

ದೇಶದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇಕು ಎಂದು ಆಗ್ರಹ

ಈ ಬಾರಿ ಪಾಕ್‌ನ ಜೆನ್‌ಜೀ ಸಮುದಾಯದವರು ಬೀದಿಗಿಳಿದಿದ್ದು, ದೇಶದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇಕು ಎಂದು ಆಗ್ರಹಿಸಿದ್ದಾರೆ.ಮುಜಾಫರನಗರದಲ್ಲಿ ವಿವಿಯಲ್ಲಿ ಉನ್ನತ ವ್ಯಾಸಂಗಕ್ಕೆ ವಿಧಿಸಿರುವ ಶುಲ್ಕದ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದು, ಬೀದಿಗಿಳಿದಿದ್ದಾರೆ. 

ನಾನಾ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ

ಇದರ ಜತೆಗೆ ಶಿಕ್ಷಣದಲ್ಲಿ ಡಿಜಿಟಲ್‌ ವ್ಯವಸ್ಥೆ, ಕ್ಷಿಪ್ರಗತಿಯಲ್ಲಿ ಫಲಿತಾಂಶ ಪ್ರಕಟ ಸೇರಿದಂತೆ ನಾನಾ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಈ ನಡುವೆ ಪ್ರತಿಭಟನೆಯಲ್ಲಿ ನಿರತರಾಗಿದ್ದ ವಿದ್ಯಾರ್ಥಿ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದು ಹಿಂಸಾಚಾರದ ಸ್ವರೂಪವನ್ನು ಪಡೆದಿದೆ.

ಪ್ರತಿಭಟನಾನಿರತ ವಿದ್ಯಾರ್ಥಿಗಳು ಟೈರ್‌ಸುಟ್ಟು ಬೆಂಕಿ ಹಚ್ಚಿ, ಸರ್ಕಾರದ ವಿರುದದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಇಸ್ರೋ ಹೊಸ ಮೈಲುಗಲ್ಲು-6100 ಕೆಜಿ ತೂಕದ ಉಪಗ್ರಹ 15 ನಿಮಿಷದಲ್ಲಿ ಕಕ್ಷೆಗೆ
ಶತ್ರು- ಮಿತ್ರರಿಗೆ ಮಹಾ ಸಹೋದರರ ಸವಾಲ್‌!