ನವದೆಹಲಿ: ಮದ್ಯ ಉದ್ಯಮಿ ಪಾಂಟಿ ಚಡ್ಡಾಗೆ ಸೇರಿದ ಫಾರ್ಮ್‌ಹೌಸ್‌ಅನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನೆಲಸಮ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಧಿಕೃತವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವವರಿಂದ ಸರ್ಕಾರಿ ಜಾಗವನ್ನು ಹಿಂಪಡೆಯುವ ಕಾರ್ಯದಲ್ಲಿ ಸುಮಾರು 10 ಎಕರೆಯ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿರುವ ಪಾಂಟಿ ಚಡ್ಡಾ ಅಲಿಯಾಸ್ ಗುರುದೀಪ್ ಸಿಂಗ್ ಅವರ ಫಾರ್ಮ್‌ಹೌಸ್ ಅನ್ನು ನೆಲಸಮ ಮಾಡಲಾಗಿದೆ ಎಂದು ಡಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.