ಚೆನ್ನೈ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತಂತ್ರ ರೂಪಿಸುವ ಭಾಗವಾಗಿ, ರಾಜಕೀಯ ತಂತ್ರಗಾರ ಹಾಗೂ ಜನ್ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರು ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ(ಟಿವಿಕೆ)ಯ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
ತಮ್ಮ ಸ್ವಂತ ಪಕ್ಷ ಸ್ಥಾಪನೆಗೂ ಮುನ್ನ ಕಿಶೋರ್ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಹಾಗೂ ತೆಲಂಗಾಣದ ವೈಎಸ್‌ಆರ್ ಕಾಂಗ್ರೆಸ್‌ಗೆ ಚುನಾವಣಾ ತಂತ್ರ ರೂಪಿಸಿದ್ದರು.