ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷ ಪೂರ್ಣ

Published : May 27, 2025, 05:02 AM IST
Prime Minister Narendra Modi (Photo/ANI)

ಸಾರಾಂಶ

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ರ ಸೋಮವಾರಕ್ಕೆ 11 ವರ್ಷ ಪೂರ್ಣಗೊಂಡಿದೆ.

ನವದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ರ ಸೋಮವಾರಕ್ಕೆ 11 ವರ್ಷ ಪೂರ್ಣಗೊಂಡಿದೆ. 2014ರ ಮೇ 26ರಂದು ಮೊದಲ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಪ್ರಧಾನಿ ಮೋದಿ ಅವರು ಸತತ 11 ವರ್ಷ ದೇಶವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ.

 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಯು 543 ಕ್ಷೇತ್ರಗಳಲ್ಲಿ 282 ಸೀಟುಗಳ ಬಹುಮತವನ್ನು ಬಾಚಿಕೊಂಡು ಯುಪಿಎ ಅಧಿಕಾರ ಅಂತ್ಯಗೊಳಿಸಿತ್ತು. ಬಳಿಕ 2019ರಲ್ಲೂ 303 ಸೀಟು ಗೆದ್ದು ಅಧಿಕಾರಕ್ಕೆ ಬಂದಿತ್ತು. 2024ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಮೈತ್ರಿಕೂಟ 293 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಮರಳಿತ್ತು. 

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ 11 ವರ್ಷ ಪೂರೈಸಿರುವುದು ಅಘೋಷಿತ ತುರ್ತು ಸ್ಥಿತಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ‘ಪ್ರಧಾನಿ ಮೋದಿ ಅವರ ಅಚ್ಚೇದಿನ್‌ ಒಂದು ದುಃಸ್ವಪ್ನವಾಗಿ ಪರಿವರ್ತನೆಗೊಂಡಿದೆ ಎಂದು ಕಿಡಿಕಾರಿದ್ದಾರೆ.

PREV
Read more Articles on

Recommended Stories

ಫೇಸ್‌ಬುಕ್ಕಲ್ಲಿ ರಾಜಕೀಯ ಜಾಹೀರಾತು ಸ್ಥಗಿತ: ಯುರೋಪ್‌ನಲ್ಲಿ ಜಾರಿ
ರಾಹುಲ್‌ ಗಾಂಧಿ 2ನೇ ಅಂಬೇಡ್ಕರ್‌: ಕಾಂಗ್ರೆಸ್‌ ನಾಯಕ ಉದಿತ್‌ ರಾಜ್