ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದಿಢೀರ್ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ಆರೋಗ್ಯದಲ್ಲಿ ತುಸು ಏರುಪೇರಾದ ಕಾರಣ ನಾನು ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಾನು ಗುಣಮುಖವಾದ ಮರುಕ್ಷಣವೇ ಯಾತ್ರೆಯಲ್ಲಿ ಭಾಗವಹಿಸಲಿದ್ದು, ಅಲ್ಲಿಯವರೆಗೂ ಎಲ್ಲ ಯಾತ್ರಾರ್ಥಿಗಳಿಗೂ ಶುಭ ಕೋರುವೆ’ ಎಂದು ತಿಳಿಸಿದ್ದಾರೆ.