ಜಾರ್ಖಂಡ್ ವಿದ್ಯಾರ್ಥಿಗಳ ವಿರುದ್ಧ ಬಲ ಪ್ರಯೋಗ ತಪ್ಪು- ತಮ್ಮದೇ ಸರ್ಕಾರದ ವಿರುದ್ಧ ರಾಗಾ ಕಿಡಿನವದೆಹಲಿ:‘ ಜಾರ್ಖಂಡ್‌ನಲ್ಲಿ ಪರೀಕ್ಷಾ ಅಕ್ರಮದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲ ಪ್ರಯೋಗ ಮಾಡಿದ್ದು ಸರಿ ಅಲ್ಲ’ ಎಂದು ಲೋಕಸಭಾ ವಿಪಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಕೂಡ ಭಾಗವಾಗಿರುವ ಜಾರ್ಖಂಡ್‌ನ ಜೆಎಂಎಂ ಸರ್ಕಾರದ ನಡೆಗೆ ಅಸಮಾಧಾನ ಹೊರ ಹಾಕಿದ್ದಾರೆ.‘ವಿದ್ಯಾರ್ಥಿಗಳಿಗೆ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿದೆ. ಮಾತುಕತೆಗಳು ಮಾತ್ರ ಇದಕ್ಕೆ ಪರಿಹಾರ ನೀಡುತ್ತದೆ. ಜಾರ್ಖಂಡ್ ಸರ್ಕಾರವು ವಿದ್ಯಾರ್ಥಿಗಳ ಮಾತುಗಳನ್ನು ಆಲಿಸಿ ಅವರ ಸಮಸ್ಯೆಗೆ ಪರಿಹಾರ ನೀಡಬೇಕು’ ಎಂದಿದ್ದಾರೆ.
ಪಿಟಿಐ ರಾಂಚಿ ಕಳೆದ ತಿಂಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಬಲಪ್ರಯೋಗ ದೇಶಾದ್ಯಂತ ತೀವ್ರ ರಾಜಕೀಯ ಸಂಚಲನ ಸೃಷ್ಟಿಸಿರುವ ನಡುವೆಯೇ, ಜಾರ್ಖಂಡ್‌ನಲ್ಲೂ ಅಂಥದ್ದೇ ಪರಿಸ್ಥಿತಿ ಮರುಕಳಿಸಿದೆ. ರಾಜ್ಯ ಲೋಕಸೇವಾ ಆಯೋಗದ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಸಿಬಿಐ ತನಿಖೆಗೆ ಆಗ್ರಹಿಸಿ ಕಳೆದ 17 ದಿನಗಳಿಂದ ಪ್ರತಿಭಟಿಸುತ್ತಿರುವ ಯುವಕರು (ಜೆನ್ ಝೀಗಳು), ಸೋಮವಾರ ರಾಜ್ಯ ವಿಧಾನಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ವಿಧಾನಸೌಧದ ಮುಖ್ಯ ದ್ವಾರದ ಸನಿಹ ಅವರನ್ನು ತಡೆಯೊಡ್ಡಿದ ಪೊಲೀಸರ ಜತೆ ಘರ್ಷಣೆ ಉಂಟಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪೋಲಿಸರು ಲಾಠಿಚಾರ್ಜ್, ಅಶ್ರುವಾಯು ಹಾಗೂ ಜಲಫಿರಂಗಿ ಪ್ರಯೋಗಿಸಿದ್ದಾರೆ.
ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಸಿಬ್ಬಂದಿ ನೇಮಕಾತಿ ಆಯೋಗ (ಜೆಎಸ್‌ಎಸ್‌ಸಿ) ನಡೆಸಿದ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ‘ಜೆಪಿಎಸ್‌ಸಿ- ಜೆಎಸ್‌ಎಸ್‌ಸಿ ಸುಧಾರಣಾ ಮೋರ್ಚಾ’ ನೇತೃತ್ವದಲ್ಲಿ ಕಳೆದ 17 ದಿನಗಳಿಂದ ಈ ಹೋರಾಟ ನಡೆಯುತ್ತಿದೆ. ಸೋಮವಾರ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಜನ್ಮದಿನದಂದೇ ವಿದ್ಯಾರ್ಥಿಗಳು ‘ವಿಧಾನಸಭಾ ಘೇರಾವ್’ ಚಳವಳಿ ಹಮ್ಮಿಕೊಂಡಿದ್ದರು.ಕೈಯಲ್ಲಿ ‘ಜೆಎಸ್‌ಎಸ್‌ಸಿ-ಸಿಜಿಎಲ್ ಪರೀಕ್ಷೆ ರದ್ದುಗೊಳಿಸಿ’, ‘ಸಿಬಿಐ ತನಿಖೆ ನಡೆಸಿ’ ಎಂಬ ಬರಹಗಳಿದ್ದ ಫಲಕಗಳನ್ನು ಮತ್ತು ರಾಷ್ಟ್ರಧ್ವಜವನ್ನು ಹಿಡಿದು ಹಳೆಯ ವಿಧಾನಸಭೆ ಕಟ್ಟಡದಿಂದ ಮೆರವಣಿಗೆ ಆರಂಭಿಸಿದ ಯುವಕ-ಯುವತಿಯರು, ವಿಧಾನಸೌಧದ ಸನಿಹ 200 ಮೀ.ವರೆಗೂ ಆಗಮಿಸಿದರು. ಆಗ ಸಾಲು ಸಾಲು ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದರು. ಈ ಹಿನ್ನೆಲೆಯಲ್ಲಿ, ಮಧ್ಯಾಹ್ನ ವಿಧಾನಸಭೆಯನ್ನು ಅಂದಿನ ಮಟ್ಟಿಗೆ ಮುಂದೂಡಲಾಯಿತು.
ಜಲಫಿರಂಗಿ ಮಧ್ಯೆ ರೇನ್ ಡಾನ್ಸ್:
ಹಲವರಿಗೆ ಗಾಯ, ಆಕ್ರೋಶ:
‘ಪ್ರತಿಭಟನೆಯನ್ನು ಹಾಳುಗೆಡವಲು ಸಮಾಜವಿರೋಧಿ ಶಕ್ತಿಗಳು ಪ್ರಯತ್ನಿಸುತ್ತಿವೆ. ನಮ್ಮ ಪ್ರತಿಭಟನೆಯಲ್ಲಿ ಅವು ಸೇರಿಕೊಳ್ಳುವುದನ್ನು ತಡೆಯಲು ಸುಮಾರು 500 ಸ್ವಯಂಸೇವಕರನ್ನು ನಿಯೋಜಿಸಿದ್ದೇವೆ’ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ಸುಧಾರಣಾ ಮಂಚ್ ತಿಳಿಸಿದೆ.
ಕಳೆದ 9 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾ (ಜೆಎಲ್‌ಕೆಎಂ) ನಾಯಕ ದೇವೇಂದ್ರ ನಾಥ್ ಮಹತೋ ಅವರು ಆ್ಯಂಬ್ಯುಲೆನ್ಸ್‌ನಲ್ಲೇ ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಸರ್ಕಾರದ ಜತೆ ಜಟಾಪಟಿ:
ಈ ನಡುವೆ, ಪರೀಕ್ಷಾ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ.) ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ಆರಂಭಿಸಿದೆ.
ಬಿಜೆಪಿಯಿಂದ ಪ್ರತಿಭಟನೆ ಹೈಜಾಕ್!:ಏತನ್ಮಧ್ಯೆ, ‘ಉದ್ಯೋಗಾಕಾಂಕ್ಷಿಗಳ ಶೇ.95ರಷ್ಟು ಬೇಡಿಕೆಗಳನ್ನು ಸರ್ಕಾರ ಈಡೇರಿಸಿದ್ದರೂ ಅವರು ಪ್ರತಿಭಟನೆ ನಡೆಸುತ್ತಿರುವುದು ದುರದೃಷ್ಟಕರ. ಬಿಜೆಪಿ ತನ್ನ ರಾಜಕೀಯ ಮಹತ್ವಾಕಾಂಕ್ಷೆಗಾಗಿ ಈ ಪ್ರತಿಭಟನೆಯನ್ನು ಹೈಜಾಕ್ (ವಶಕ್ಕೆ) ಮಾಡಿದೆ’ ಎಂದು ರಾಜ್ಯ ಸಚಿವ ಸುದಿವ್ಯ ಕುಮಾರ್ ಆರೋಪಿಸಿದ್ದಾರೆ.
==