ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ ಮಾನಹಾನಿ ಹೇಳಿಕೆ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯ ಜೂ.7ಕ್ಕೆ ನಿಗದಿಪಡಿಸಿದೆ.
2018 ಅಗಸ್ಟ್ 04 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಆಕ್ಷೇಪಾರ್ಹ ಪದ ಬಳಸಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಎನ್ನುವವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕಳೆದ ವರ್ಷದ ಡಿಸೆಂಬರ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ವಾರಂಟ್ ಜಾರಿಗೊಳಿಸಿತ್ತು.
ಫೆಬ್ರವರಿ ತಿಂಗಳಿನಲ್ಲಿ ಅಮೇಠಿಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು.