ವಯನಾಡ್: ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಜೊತೆಗಿನ ಸಂಘರ್ಷದಲ್ಲಿ ಮಾನವರ ಸಾವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಮೊಟಕುಗೊಳಿಸಿ ರಾಹುಲ್ ಗಾಂಧಿ ಕ್ಷೇತ್ರಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು.ಈ ವೇಳೆ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಕ್ಷೇತ್ರದ ಸಂಸದರೂ ಆಗಿರುವ ರಾಹುಲ್ ಗಾಂಧಿ ಮೃತರ ಕುಟುಂಬಗಳಿಗೆ ಶೀಘ್ರ ಪರಿಹಾರಧನ ಬಿಡುಗಡೆ ಮಾಡುವಂತೆ ಸೂಚಿಸಿದರು.
ಇದಕ್ಕೂ ಮೊದಲು ಕಾಡಾನೆ ಜೊತೆಗಿನ ಸಂಘರ್ಷದಲ್ಲಿ ಮೃತಪಟ್ಟಿದ್ದ ಆಜಿ, ಪೌಲ್ ಮತ್ತು ಪ್ರಜೀಶ್ ಅವರ ಮನೆಗಳಿಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.