ಅತ್ಯಾಚಾರದ ಕುರಿತು ಹೇಳಿಕೆ ದಾಖಲಿಸಿಕೊಳ್ಳುವಾಗ ನ್ಯಾಯಾಧೀಶರೇ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯೊಬ್ಬಳು ದೂರು ದಾಖಲಿಸಿದ್ದಾಳೆ.
ಅಗರ್ತಲಾ: ಅತ್ಯಾಚಾರ ಕುರಿತು ಹೇಳಿಕೆ ನೀಡುವಾಗ ಸ್ವತಃ ನ್ಯಾಯಾಧೀಶರೇ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
ಈ ಘಟನೆ ತ್ರಿಪುರಾದ ಕಮಲಾಪುರ ನ್ಯಾಯಾಲಯದಲ್ಲಿ ನಡೆದಿದೆ. ಫೆ.16ರಂದು ಹೇಳಿಕೆ ನೀಡಲು ಕಚೇರಿಗೆ ತೆರಳಿದಾಗ ನ್ಯಾಯಾಧೀಶರು ನನ್ನನ್ನು ಅಸಭ್ಯವಾಗಿ ಮುಟ್ಟಲು ಬಂದರು.
ಆಗ ನಾನು ಹೊರಗೆ ಬಂದು ಪತಿಗೆ ವಿಷಯ ಮುಟ್ಟಿಸಿದೆ ಎಂದು ಸಂತ್ರಸ್ತೆ ದೂರಿದ್ದಾಳೆ. ಈ ಕುರಿತು ಸಂತ್ರಸ್ತ ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲು ಮೂವರು ನ್ಯಾಯಾಧೀಶರ ಸಮಿತಿ ರಚಿಸಲಾಗಿದೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.