- ನಿರ್ಮಾಣ ಹಂತದಲ್ಲಿದ್ದ ಸುರಂಗ ಬಳಿ ಭಾರಿ ಮಣ್ಣು ಕುಸಿತ
- ಪ್ರಕೃತಿ ವಿಕೋಪ
---ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಬಸ್ಸು ನೀರುಪಾಲು
ಮಹಾರಾಷ್ಟ್ರ, ಕಾಶ್ಮೀರ, ದಿಲ್ಲಿ ಸೇರಿ
- ವಿವರ ಪುಟ 9 ಪಿಟಿಐ ವಯನಾಡು
ಇದರ ಬೆನ್ನಲ್ಲೇ ಹವಾಮಾನ ಇಲಾಖೆ ವಯನಾಡು ಮತ್ತು ನೆರೆಯ ಕಲ್ಲಿಕೋಟೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ವಾಸವಾಗಿರುವವರನ್ನು ಅಲ್ಲಿಂದ ತೆರವು ಮಾಡಲಾಗಿದೆ. ತುರ್ತುಸ್ಥಿತಿಗಾಗಿ ರಕ್ಷಣಾ ತಂಡವೊಂದನ್ನು ತ್ರಿಶೂರಿನಲ್ಲಿ ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ.
ಕಲ್ಲಿಕೋಟೆ ಮತ್ತು ವಯನಾಡು ಸಂಪರ್ಕಿಸಲು ರಾಜ್ಯ ಸರ್ಕಾರ 8 ಕಿ.ಮೀ ಉದ್ದದ ಅವಳಿ ಸುರಂಗ ಮಾರ್ಗ ನಿರ್ಮಿಸುತ್ತಿದೆ. ಕಾಮಗಾರಿಯ ಭಾಗವಾಗಿ ಸುರಂಗದಿಂದ ತೆಗೆದ ಮಣ್ಣನ್ನು ಪಕ್ಕದಲ್ಲೇ 40 ಎಕರೆ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ರಾಶಿ ಹಾಕಲಾಗಿತ್ತು. ಸೋಮವಾರದಿಂದೀಚೆಗೆ ವಯನಾಡು ಪ್ರದೇಶದಲ್ಲಿ 25.6 ಸೆ.ಮೀನಷ್ಟು ಭಾರೀ ಮಳೆ ಸುರಿದ ಪರಿಣಾಮ ಕಲ್ಲಾಡಿಯಲ್ಲಿ ಮೀನಾಕ್ಷಿ ಸೇತುವೆ ಬಳಿ ಮಂಗಳವಾರ ಬೆಳಗ್ಗೆ 11 ಗಂಟೆ ವೇಳೆಗೆ ಸುರಂಗ ಮಾರ್ಗದ ಬಳಿ ರಾಶಿ ಹಾಕಿದ್ದ ಮಣ್ಣು ದಿಢೀರ್ ಕುಸಿದಿದೆ. ಪರಿಣಾಮ ಭಾರೀ ಪ್ರಮಾಣದಲ್ಲಿ ಮಣ್ಣು ರಸ್ತೆಯಲ್ಲಿ ಪ್ರವಾಹೋಪಾದಿಯಲ್ಲಿ ಹರಿದುಬಂದಿದ್ದು, ತನ್ನೊಂದಿಗೆ ದೊಡ್ಡ ಲಾರಿ, ಬೈಕ್, ಜನರನ್ನು ಕೊಚ್ಚಿಕೊಂಡು ಹೋಗಿದೆ. ಮಣ್ಣಿನಡಿಯಲ್ಲಿ ಒಂದು ಮನೆ ಮತ್ತು ಮಸೀದಿ ಸಮಾಧಿಯಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಭೇಟಿ ನೀಡಿದ್ದು, ‘ಅಧಿಕಾರಿಗಳು ಹೇಳಿದಂತೆ ಮಣ್ಣಿನ ರಾಶಿಯನ್ನು ಸರಿಯಾಗಿ ವಿಲೇವಾರಿ ಮಾಡದ ಗುತ್ತಿಗೆದಾರರ ಬೇಜವಾಬ್ದಾರಿತನದಿಂದ ಕಾರಣ ಹೀಗಾಗಿದೆ’ ಎಂದು ಕಿಡಿ ಕಾರಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದರು. ಅತ್ತ ಈ ಭೂಕುಸಿತವನ್ನು ರಾಜ್ಯದ ಕೃಷಿ ಸಚಿವರು ‘ಮಾನವನಿರ್ಮಿತ ದುರಂತ’ ಎಂದು ಕರೆದಿದ್ದಾರೆ.
ತಮ್ಮ ಕ್ಷೇತ್ರದಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರಿಗೆ ಸಂಸದೆ ಪ್ರಿಯಾಂಕಾ ಗಾಂಧಿ ಸಂತಾಪ ಸೂಚಿಸಿದ್ದು, ‘ಸಿಎಂ ಸತೀಶನ್ ಅವರು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ನಾವು ಸದಾ ನಿಮ್ಮೊಂದಿಗಿರುತ್ತೇವೆ’ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಜನರಲ್ಲಿ ಧೈರ್ಯ ತುಂಬಿದ್ದಾರೆ.