ಪಾಕ್‌ ಸುಳ್ಳಿಗೆ ಮೋದಿ ಚಿತ್ರ ಸಾಕ್ಷ್ಯ!

KannadaprabhaNewsNetwork |  
Published : May 13, 2025, 11:59 PM IST
ಮೋದಿ  | Kannada Prabha

ಸಾರಾಂಶ

ತನ್ನ ವಿರುದ್ಧದ ‘ಆಪರೇಷನ್‌ ಸಿಂದೂರ’ಕ್ಕೆ ಪ್ರತಿಯಾಗಿ ಭಾರತದ ಆದಂಪುರ ವಾಯುನೆಲೆ ನಾಶ ಮಾಡಿದ್ದೇವೆ, ಭಾರತದ ಮಿಗ್‌-29 ಹಾಗೂ ಎಸ್‌ 400 ವಾಯುರಕ್ಷಣಾ ವ್ಯವಸ್ಥೆ ಹೊಡೆದುರುಳಿಸಿದ್ದೇವೆ, ಭಾರತದ 60 ಯೋಧರ ಸಾಯಿಸಿದ್ದೇವೆ ಎಂದು ಸುಳ್ಳಿನ ಸರಮಾಲೆ ಪೋಣಿಸಿದ್ದ ಪಾಕಿಸ್ತಾನಕ್ಕೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಕನ್ನಡಿ ಹಿಡಿದಿದ್ದಾರೆ.

ಭಾರತದ 2ನೇ ಅತಿದೊಡ್ಡ ವಾಯುನೆಲೆ ಧ್ವಂಸ ಎಂಬ ಪಾಪಿಸ್ತಾನ ಮಿಥ್ಯೆ ಬಯಲು

ಪಾಕ್‌ ಸುಳ್ಳಿಗೆ ಮೋದಿ ಸ್ಪಷ್ಟ ಸಾಕ್ಷ್ಯ!

- ಮಿಗ್‌-29, ಎಸ್‌-400 ವ್ಯವಸ್ಥೆ ನಾಶ, 60 ಭಾರತ ಸೈನಿಕರ ಹತ್ಯೆ ಎಂಬ ಪಾಕ್‌ ಹೇಳಿಕೆ ಸುಳ್ಳೆಂದು ಸಾಬೀತು

- ಆದಂಪುರದಲ್ಲಿ ಯುದ್ಧ ವಿಮಾನ, ವಾಯುರಕ್ಷಣಾ ವ್ಯವಸ್ಥೆ ಎದುರೇ ನಿಂತು ‘ಆಲ್‌ ಇಸ್‌ ವೆಲ್‌’ ಎಂದ ಪಿಎಂ

--

ಪಿಟಿಐ ಆದಂಪುರ

ತನ್ನ ವಿರುದ್ಧದ ‘ಆಪರೇಷನ್‌ ಸಿಂದೂರ’ಕ್ಕೆ ಪ್ರತಿಯಾಗಿ ಭಾರತದ ಆದಂಪುರ ವಾಯುನೆಲೆ ನಾಶ ಮಾಡಿದ್ದೇವೆ, ಭಾರತದ ಮಿಗ್‌-29 ಹಾಗೂ ಎಸ್‌ 400 ವಾಯುರಕ್ಷಣಾ ವ್ಯವಸ್ಥೆ ಹೊಡೆದುರುಳಿಸಿದ್ದೇವೆ, ಭಾರತದ 60 ಯೋಧರ ಸಾಯಿಸಿದ್ದೇವೆ ಎಂದು ಸುಳ್ಳಿನ ಸರಮಾಲೆ ಪೋಣಿಸಿದ್ದ ಪಾಕಿಸ್ತಾನಕ್ಕೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಕನ್ನಡಿ ಹಿಡಿದಿದ್ದಾರೆ. ಈ ಮೂಲಕ ಜಾಗತಿಕ ಸಮುದಾಯದ ಮುಂದೆ ಮತ್ತೊಮ್ಮೆ ಪಾಕಿಸ್ತಾನದ ಬಣ್ಣ ಬಯಲು ಮಾಡಿದ್ದಾರೆ.

ಮಂಗಳವಾರ ಬೆಳ್ಗಂಬೆಳಗ್ಗೆ ಪಾಕಿಸ್ತಾನದ ಗಡಿಯಲ್ಲಿರುವ ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿದ ಪ್ರಧಾನಿ, ಅಲ್ಲಿ ವಾಯುಪಡೆ ಯೋಧರೊಂದಿಗೆ ಸಂವಾದ ನಡೆಸಿದರು. ಬಳಿಕ ವಾಯುನೆಲೆಯೊಳಗೆ ಮಿಗ್‌- 29 ವಿಮಾನ, ಎಸ್‌ 400 ಏರ್‌ಡಿಫೆನ್ಸ್‌ ಸಿಸ್ಟಮ್ ಮುಂದೆ ನಿಂತು ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಮ್ಮೆಲ್ಲಾ ಶಸ್ತ್ರಾಸ್ತ್ರಗಳು, ಆಯಕಟ್ಟಿನ ಪ್ರದೇಶಗಳು ಸುರಕ್ಷಿತವಾಗಿವೆ’ ಎಂಬ ಸಂದೇಶವನ್ನು ಪಾಕಿಸ್ತಾನ ಮತ್ತು ಜಾಗತಿಕ ಸಮುದಾಯಕ್ಕೆ ರವಾನಿಸಿದರು. ಜೊತೆಗೆ ದೇಶವನ್ನು ಕಾಯಲು ಎಂತಹ ಬಲಾಢ್ಯ ಅಸ್ತ್ರಗಳು ನಮ್ಮ ಬಳಿ ಇವೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ ನೀಡಿದರು.

ಭಾರತದ ದಾಳಿಗೆ ಪ್ರತಿದಾಳಿ ನಡೆಸುವ ವಿಫಲ ಯತ್ನ ನಡೆಸಿದ್ದ ಪಾಕಿಸ್ತಾನ, ನಮ್ಮ ಸೇನೆ ‘ಆದಂಪುರದಲ್ಲಿರುವ ಎಸ್‌-400, ರನ್‌ವೇ, ರಡಾರ್‌, ಯುದ್ಧವಿಮಾನಗಳನ್ನು ನಾಶ ಮಾಡಿ 60 ಜನರನ್ನು ಕೊಂದಿದ್ದೇವೆ. ಅಲ್ಲಿ ಇನ್ನು ಕೆಲ ವರ್ಷಗಳ ಕಾಲ ಏನೂ ಮಾಡಲಾಗದು’ ಎಂದು ಹೇಳಿಕೊಂಡು, ನಕಲಿ ಚಿತ್ರಗಳನ್ನು ತೋರಿಸಿತ್ತು.

ಅದರ ಬೆನ್ನಲ್ಲೇ, ಆದಂಪುರ ವಾಯುನೆಲೆ ಹಾಗೂ ಮೂಲಸೌಕರ್ಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂಬುದನ್ನು ವಿಂಗ್‌ ಕಮಾಂಡರ್‌ ವ್ಯೋಮಿಕಾ ಸಿಂಗ್‌ ಮೇ 10ರಂದು ಪತ್ರಿಕಾಗೋಷ್ಠಿಯಲ್ಲಿ ಸಾಕ್ಷಿ ಸಮೇತ ಸಾಬೀತುಪಡಿಸಿದ್ದರು. ಈಗ ಮೋದಿ, ದಾಳಿ ನಡೆಸಲಾಗಿದೆ ಎನ್ನಲಾಗಿದ್ದ ಜಾಗದಲ್ಲೇ ನಿಂತು ಪಾಕ್‌ ಸುಳ್ಳನ್ನು ಬಯಲಿಗೆಳೆದಿದ್ದಾರೆ.

ಅದಂಪುರದ ಮಹತ್ವ:

ಆದಂಪುರ, ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ಪಂಜಾಬ್‌ನಲ್ಲಿದೆ. ಇದು ಭಾರತದ 2ನೇ ಅತಿದೊಡ್ಡ ವಾಯುನೆಲೆ. 1969 ಮತ್ತು 1971ರಲ್ಲಿ ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಯುದ್ಧದಲ್ಲಿ ಈ ವಾಯುನೆಲೆ ಪ್ರಮುಖ ಪಾತ್ರವಹಿಸಿತ್ತು. ಕಳೆದ ವಾರ ಪಾಕ್‌ ಜೊತೆಗಿನ ಉದ್ವಿಗ್ನ ಸನ್ನಿವೇಶದಲ್ಲೂ ಈ ನೆಲೆ ಮಹತ್ವದ ಪಾತ್ರ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ನೀಡುವ ಮತ್ತು ಅದರ ಸುಳ್ಳನ್ನು ಬಯಲು ಮಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಇಲ್ಲಿಗೆ ಭೇಟಿ ನೀಡಿದ್ದರು ಎಂದು ವಿಶ್ಲೇಷಿಸಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಉತ್ತರದ ಮಹಿಳೆಯರು ಬರೀ ಮನೆಗೆಲಸಕ್ಕೆ ಸೀಮಿತ: ದಯಾನಿಧಿ
ಶೀಘ್ರ ಇರಾನ್‌ ತೊರೆಯಿರಿ : ಭಾರತೀಯರಿಗೆ ಸೂಚನೆ