ಮತ್ತೆ ಭೂಮಿಗೆ ಬಿದ್ದ ಚಂದ್ರಯಾನ-3 ರಾಕೆಟ್‌

KannadaprabhaNewsNetwork |  
Published : Nov 17, 2023, 06:45 PM IST
ರಾಕೆಟ್‌ | Kannada Prabha

ಸಾರಾಂಶ

ಬೆಂಗಳೂರು: ಚಂದ್ರಯಾನ-3 ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ್ದ ಎಲ್‌ಎಂವಿ3 ಎಂ4 ರಾಕೆಟ್‌ನ ಅವಶೇಷಗಳು ಬುಧವಾರ ಮಧ್ಯಾಹ್ನ ಅನಿಯಂತ್ರಿತವಾಗಿ ಭೂಮಿಗೆ ಬಿದ್ದಿವೆ ಎಂದು ಇಸ್ರೋ ಹೇಳಿದೆ.

- ನಿನ್ನೆ ಮಧ್ಯಾಹ್ನ 2.30ರ ಸುಮಾರಿಗೆ ಪೆಸಿಫಿಕ್‌ ಸಾಗರದಲ್ಲಿ ಬಿದ್ದ ಅವಶೇಷ

ಬೆಂಗಳೂರು: ಚಂದ್ರಯಾನ-3 ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ್ದ ಎಲ್‌ಎಂವಿ3 ಎಂ4 ರಾಕೆಟ್‌ನ ಅವಶೇಷಗಳು ಬುಧವಾರ ಮಧ್ಯಾಹ್ನ ಅನಿಯಂತ್ರಿತವಾಗಿ ಭೂಮಿಗೆ ಬಿದ್ದಿವೆ ಎಂದು ಇಸ್ರೋ ಹೇಳಿದೆ.

ಜು.14ರಂದು ಚಂದ್ರಯಾನ-3 ನೌಕೆಯನ್ನು ಈ ರಾಕೆಟ್‌ ಕಕ್ಷೆಗೆ ಸೇರಿಸಿತ್ತು. ಇದಾದ 124 ದಿನಗಳ ಬಳಿಕ ರಾಕೆಟ್‌ನ ಅವಶೇಷಗಳು ಭೂಮಿ ತಲುಪಿದ್ದು, ಇವು ಭಾರತದ ಮೇಲೆ ಸಾಗದೆ ಉತ್ತರ ಪೆಸಿಫಿಕ್‌ ಸಾಗರದಲ್ಲಿ ಬಿದ್ದಿವೆ. ಅಲ್ಲದೇ ಬಾಹ್ಯಾಕಾಶದಲ್ಲಿ ತ್ಯಾಜ್ಯಗಳನ್ನು ಕಡಿಮೆ ಮಾಡುವ ಹಾಗೂ ಆಕಸ್ಮಿಕ ಸ್ಫೋಟಗಳನ್ನು ತಗ್ಗಿಸುವ ದೃಷ್ಟಿಯಿಂದ ಈ ರಾಕೆಟ್‌ನಲ್ಲಿರುವ ಎಲ್ಲಾ ಇಂಧನ ಮತ್ತು ಶಕ್ತಿಯ ಮೂಲಗಳನ್ನು ತೆಗೆದುಹಾಕಲಾಗಿತ್ತು. ಇದು ಬಾಹ್ಯಾಕಾಶದಲ್ಲೂ ಅಂತಾರಾಷ್ಟ್ರೀಯ ಕಾನೂನನ್ನು ಗೌರವಿಸಿ ನಡೆದುಕೊಳ್ಳುವ ಭಾರತದ ಬದ್ದತೆಗೆ ಇದು ಸಾಕ್ಷಿಯಾಗಿದೆ ಎಂದು ಇಸ್ರೋ ಹೇಳಿದೆ. ಜು.14ರಂದು ಶ್ರೀಹರಿಕೋಟಾದಿಂದ ಚಂದ್ರಯಾನ ನೌಕೆಯನ್ನು ಹೊತ್ತ ಎಲ್‌ಎಂವಿ ರಾಕೆಟ್‌ ಯಶಸ್ವಿಯಾಗಿ ನೌಕೆಯನ್ನು ಕಕ್ಷೆಗೆ ಸೇರಿಸಿತ್ತು. ಇದಾದ ಬಳಿಕ ನೌಕೆಯನ್ನು ಅಂತಿಮ ಹಂತಕ್ಕೆ ಕೊಂಡೊಯ್ದಿದ್ದ ರಾಕೆಟ್‌ನ ಮುಂಭಾಗ ಬಾಹ್ಯಾಕಾಶದಲ್ಲೇ ಉಳಿದುಕೊಂಡಿತ್ತು. ಇದೀಗ ಯಾವುದೇ ನಿಯಂತ್ರಣವಿಲ್ಲದೇ ಇದು ಭೂಮಿಗೆ ಬಿದ್ದಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

2 ದಿನಕ್ಕಾಗುವಷ್ಟೇ ಎಲ್ಪಿಜಿ - ಹೋಟೆಲ್‌ನಲ್ಲಿ ಮೆನು ಕಡಿತ, ಕಾಫಿ ಬದಲು ಜ್ಯೂಸ್‌!
40 ಲಕ್ಷ ಮಹಿಳೆಯರಿಗೆ 9000 ರು. ಗ್ಯಾರಂಟಿ ! ಎಲೆಕ್ಷನ್‌ ಮುನ್ನ ಬಂಪರ್‌