ಭಾರತದ ಬ್ಯಾಂಕುಗಳಲ್ಲಿ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಮಲ್ಯ, ನೀರವ್‌ಗೆ ಸೇರಿದ ₹22000 ಕೋಟಿ ಆಸ್ತಿ ಜಪ್ತಿ

KannadaprabhaNewsNetwork |  
Published : Dec 19, 2024, 12:32 AM ISTUpdated : Dec 19, 2024, 04:19 AM IST
ನೀರವ್ | Kannada Prabha

ಸಾರಾಂಶ

 ಭಾರತದ ಬ್ಯಾಂಕುಗಳಲ್ಲಿ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ₹ 14,131 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನವದೆಹಲಿ: ಭಾರತದ ಬ್ಯಾಂಕುಗಳಲ್ಲಿ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ₹ 14,131 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಕುರಿತು ಬುಧವಾರ ಸಂಸತ್ತಿಗೆ ಮಾಹಿತಿ ನೀಡಿದ ಅವರು, ’ಮಲ್ಯ ಹಾಗೂ ಇತರ ದೇಶಭ್ರಷ್ಟ ಉದ್ಯಮಿಗಳಾದ ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್ ವ್ಯಕ್ತಿಗಳ ಸಾಲವನ್ನು ಮರುಪಾವತಿಸಲು ಜಾರಿ ನಿರ್ದೇಶನಾಲಯವು ಒಟ್ಟು ₹ 22,280 ಕೋಟಿ ಮೌಲ್ಯದ ಆಸ್ತಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ ಹಾಗೂ ಆರ್ಥಿಕ ಅಪರಾಧಿಗಳ ವಿರುದ್ಧದ ಹೋರಾಟವನ್ನು ಮುಂದುವರಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.ವಿವರ 9

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಜಕೀಯ ಪಕ್ಷಗಳಿಗೆ ₹3811 ಕೋಟಿ ಫಂಡ್‌ : ಬಿಜೆಪಿಗೇ 82%!
ಕಾಂಗ್ರೆಸ್‌ನಿಂದ ದೇಶ ವಿರೋಧಿ ಚಟುವಟಿಕೆ : ಮೋದಿ ಮತ್ತೆ ತರಾಟೆ