ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣ

KannadaprabhaNewsNetwork |  
Published : Apr 16, 2026, 01:45 AM IST
Samrat

ಸಾರಾಂಶ

ಬಿಹಾರದ 24ನೇ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಂತಾಗಿದೆ.

 ಪಟನಾ: ಬಿಹಾರದ 24ನೇ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಂತಾಗಿದೆ.

ಲೋಕಭವನದಲ್ಲಿ ಚೌಧರಿ ಪ್ರಮಾಣ ವಚನ

ಬುಧವಾರ ಬೆಳಿಗ್ಗೆ ಲೋಕಭವನದಲ್ಲಿ ಚೌಧರಿ ಅವರಿಗೆ ರಾಜ್ಯಪಾಲ ಸೈಯದ್‌ ಅತಾ ಹಸ್ನೈನ್‌ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ, ಜೆಡಿಯು ನಾಯಕರಾದ ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಸಚಿವ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಜೆಡಿಯು ನಾಯಕರು ಶೀಘ್ರದಲ್ಲೇ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ನಿರೀಕ್ಷೆ

ಇಬ್ಬರು ಜೆಡಿಯು ನಾಯಕರು ಶೀಘ್ರದಲ್ಲೇ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ನಿರೀಕ್ಷೆಯಿದೆ. ನೂತನ ಸಿಎಂಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯಸಭೆಗೆ ಆಯ್ಕೆಯಾಗಿರುವ ಜೆಡಿಯು ವರಿಷ್ಠ ನಿತೀಶ್‌ ಕುಮಾರ್‌, ಸುಮಾರು 2 ದಶಕದಿಂದ ಉಳಿಸಿಕೊಂಡು ಬಂದಿದ್ದ ಸಿಎಂ ಪದವಿಗೆ ಮಂಗಳವಾರ ರಾಜೀನಾಮೆ ನೀಡಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

2 ಐತಿಹಾಸಿಕ ಸಾಂವಿಧಾನಿಕ ತಿದ್ದುಪಡಿ ಸೇರಿ 3 ವಿಧೇಯಕ ಮಂಡನೆಗೆ ಕ್ಷಣಗಣನೆ
ಹೋರ್ಮುಜ್‌ನಲ್ಲಿ ಇದೀಗ ಸಂಪೂರ್ಣ ನಿರ್ಬಂಧ ಜಾರಿ