ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರ ಬಿಜೆಪಿ ವಲಸೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಉದ್ಧವ್ ಠಾಕ್ರೆ ಬಣದ ಶಿವಸೇನೆ ಸಂಸದ ಸಂಜಯ್ ರಾವುತ್, ರಾಜ್ಯದಲ್ಲಿ ಬಿಜೆಪಿ ರಾಜಕೀಯ ವೇಶ್ಯಾಗೃಹ ನಡೆಸುತ್ತಿದೆ ಎಂಬ ಕೀಳು ಹೇಳಿಕೆ ನೀಡಿದ್ದಾರೆ.
ಹೀಗಾಗಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಬೇರೆ ಬೇರೆ ಪಕ್ಷಗಳ ನಾಯಕರನ್ನು ತನ್ನತ್ತ ಸೆಳೆಯುವ ಮೂಲಕ ರಾಜಕೀಯ ವೇಶ್ಯಾಗೃಹ ಆರಂಭಿಸಿದೆ ಎಂದು ಪಕ್ಷದ ಮುಖವಾಣಿ ಸಾಮ್ನಾದ ‘ರೋಕ್‌ತೋಕ್’ ಅಂಕಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.