ಬಿಹಾರದಲ್ಲಿ ಕೈಬಿಟ್ಟ 65 ಲಕ್ಷ ಮತದಾರರ ಮಾಹಿತಿ ಆ.9ರಒಳಗೆ ನೀಡಿ : ಸುಪ್ರೀಂಕೋರ್ಟ್‌

KannadaprabhaNewsNetwork |  
Published : Aug 07, 2025, 12:46 AM ISTUpdated : Aug 07, 2025, 04:22 AM IST
Supreme Court  Of india

ಸಾರಾಂಶ

ಬಿಹಾರದಲ್ಲಿ ನಡೆಸಲಾದ ವಿಶೇಷ ಮತಪಟ್ಟಿ ಪರಿಷ್ಕರಣೆ ವೇಳೆ ಕೈಬಿಡಲಾದದ 65 ಲಕ್ಷ ಮತದಾರರ ಕುರಿತ ಮಾಹಿತಿಯನ್ನು ಆ.9ರೊಳಗೆ ತನಗೆ ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ಬುಧವಾರ ಸೂಚಿಸಿದೆ.

  ನವದೆಹಲಿ :  ಬಿಹಾರದಲ್ಲಿ ನಡೆಸಲಾದ ವಿಶೇಷ ಮತಪಟ್ಟಿ ಪರಿಷ್ಕರಣೆ ವೇಳೆ ಕೈಬಿಡಲಾದದ 65 ಲಕ್ಷ ಮತದಾರರ ಕುರಿತ ಮಾಹಿತಿಯನ್ನು ಆ.9ರೊಳಗೆ ತನಗೆ ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ಬುಧವಾರ ಸೂಚಿಸಿದೆ.

65 ಲಕ್ಷ ಮತದಾರರನ್ನು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಎಡಿಆರ್‌ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ‘ಮತಪಟ್ಟಿ ಕೈಬಿಟ್ಟ ವ್ಯಕ್ತಿಗಳು ಮೃತಪಟ್ಟಿದ್ದಾರೆಯೇ ಅಥವಾ ಬೇರೆ ಸ್ಥಳಕ್ಕೆ ವರ್ಗಾವಣೆಗೊಂಡಿದ್ದಾರೆಯೇ ಎಂಬುದನ್ನು ನಮೂದಿಸಬೇಕು. ಈ ಕುರಿತು ಈಗಾಗಲೇ ರಾಜಕೀಯ ಪಕ್ಷಗಳಿಗೆ ನೀಡಿರುವ ಕರಡು ವರದಿಯನ್ನು ಸಲ್ಲಿಸಬೇಕು ಎಂದು ಕೋರ್ಟ್‌ ಸೂಚಿಸಿದೆ.

ಮತಪಟ್ಟಿ ಪರಿಷ್ಕರಣೆಯನ್ನೂ ಪ್ರಶ್ನಿಸಿ ಈಗಾಗಲೇ ಹಲವು ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಅದನ್ನೂ ಕೋರ್ಟ್‌ ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಇರಾನ್‌ನಲ್ಲೀಗ ಸರ್ಕಾರದ ಬೆಂಬಲಿಗರ ಬಲಪ್ರದರ್ಶನ!
ಒಂದೇ ದಿನ 2 ಬಾರಿ ಪ್ರಜ್ಞೆ ತಪ್ಪಿದ ಧನಕರ್‌ : ದಿಲ್ಲಿ ಏಮ್ಸ್‌ಗೆ ದಾಖಲು