ಎಸ್‌ಡಿಎ ಶ್ರೀಧರ್ ಮಹಿಳೆಗೆ ಮಾನಸಿಕ ಕಿರುಕುಳ: ಗೌಡೇಗೌಡ

KannadaprabhaNewsNetwork |  
Published : Nov 03, 2026, 01:30 AM IST
2ಸಿಎಚ್‌ಎನ್‌54ಹನೂರು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಅವರಿಗೆ ಶ್ರೀಧರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಖಿತ ಮನವಿ ಪತ್ರವನ್ನು ರೈತ ಸಂಘದ ವತಿಯಿಂದ ಸಲ್ಲಿಸಲಾಯಿತು. | Kannada Prabha

ಸಾರಾಂಶ

ತಹಸೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಸಹಾಯಕ ಶ್ರೀಧರ್ ಮಹಿಳಾ ಸಿಬ್ಬಂದಿ, ರೈತರು ಮತ್ತು ಸಾರ್ವಜನಿಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದು, ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ಅವರನ್ನು ಕೂಡಲೇ ಅಮಾನತುಗೊಳಿಸಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಗೌಡೇಗೌಡ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ತಹಸೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಸಹಾಯಕ ಶ್ರೀಧರ್ ಮಹಿಳಾ ಸಿಬ್ಬಂದಿ, ರೈತರು ಮತ್ತು ಸಾರ್ವಜನಿಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದು, ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ಅವರನ್ನು ಕೂಡಲೇ ಅಮಾನತುಗೊಳಿಸಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಗೌಡೇಗೌಡ ಆಗ್ರಹಿಸಿದರು.

ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಅವರಿಗೆ ಶ್ರೀಧರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಖಿತ ಮನವಿ ಪತ್ರ ಸಲ್ಲಿಸಿದ ನಂತರ ಮಾತನಾಡಿ, ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಸಹಾಯಕ ಶ್ರೀಧರ್ ಅವರ ವಿರುದ್ಧ ಈ ಹಿಂದೆ ಹಲವಾರು ಸಂಘಟನೆಗಳು ದೂರು ನೀಡಿವೆ. ಈಗಾಗಲೇ ಕೊಳ್ಳೇಗಾಲ ತಾಲೂಕು ಕಚೇರಿಯಲ್ಲೂ ಇದೇ ರೀತಿ ರೈತರು ಮತ್ತು ಸಿಬ್ಬಂದಿ ಮೇಲೆ ದರ್ಪದಿಂದ ವರ್ತಿಸುತ್ತಾರೆ ಎಂದು ಅಲ್ಲಿನ ಸಂಘ ಸಂಸ್ಥೆಗಳು ಹೋರಾಟ ಮಾಡಿ ಅಲ್ಲಿಂದ ಹೊರಹಾಕಿದ್ದವು. ಆದರೂ ಇಲ್ಲಿಯೂ ಅದೇ ಚಾಳಿಯನ್ನು ಮುಂದುವರಿಸಿದ್ದಾರೆ. ಜೊತೆಗೆ ಯಾವುದೇ ಮೇಲಧಿಕಾರಿಗಳ ಅನುಮತಿ ಇಲ್ಲದೆ ತಹಸೀಲ್ದಾರ್ ಅವರ ಮೇಲೆಯೇ ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಮಾತನಾಡುತ್ತಿದ್ದಾರೆ ಎಂದು ದೂರಿದರು.

ಒಂದು ವೇಳೆ ಶ್ರೀಧರ್ ವಿರುದ್ಧ ತಹಸೀಲ್ದಾರ್ ಅವರು ಜಾತಿ ನಿಂದನೆ ಮಾಡಿದ್ದರೆ ಅವರ ಮೇಲೂ ಕ್ರಮವಾಗಲಿ. ನಾವು ಇಲ್ಲಿ ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ. ನೊಂದವರ ಪರ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲಕ್ಕೆ ನಿಲ್ಲಲಿದೆ ಎಂದರು.

ನಾವು ತಹಸೀಲ್ದಾರ್ ಅವರನ್ನು ಭೇಟಿ ಮಾಡಿ, ಹಿಂದೆ ಹಲವಾರು ಸಂಘಟನೆಗಳು ನೀಡಿರುವ ಅರ್ಜಿಯ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದ್ದೇವೆ. ಅದಕ್ಕೆ ಅವರು, ನಮಗೆ ಕಾನೂನಿನಲ್ಲಿ ಅವಕಾಶ ಇಲ್ಲದಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಿದ್ದೇವೆ ಎಂದು ಉತ್ತರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ಚಾಮರಾಜನಗರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಅವರು ಏನು ಕ್ರಮ ಕೈಗೊಂಡಿದ್ದಾರೆ ಎಂದು ಕೇಳಲು ಹೋಗುತ್ತಿದ್ದೇವೆ. ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ಶ್ರೀಧರ್ ಅವರನ್ನು ಅಮಾನತುಗೊಳಿಸಿ, ತನಿಖೆಯಲ್ಲಿ ತಪ್ಪು ಸಾಬೀತಾದರೆ ಸೇವೆಯಿಂದ ವಜಾಗೊಳಿಸುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಉಪಾಧ್ಯಕ್ಷ ಲೋಕೇಶ್ ಗೌಡ ಜಿಲ್ಲಾ ಕಾರ್ಯದರ್ಶಿ ಅಮ್ಜದ್ ಖಾನ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಾಜಮಣಿ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಮುತ್ತುಲಕ್ಷ್ಮಿ, ತಾಲೂಕು ಅಧ್ಯಕ್ಷ ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ವೆಂಕಟಾಚಲ ಉಪಾಧ್ಯಕ್ಷ ಕಾಶಿ ಗೌಡ, ನಾಗರಾಜು ಹಾಜರಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಎಸ್‌ಐಆರ್‌ ಚರ್ಚೆಗೆ ಅಧಿವೇಶನ ಕರೆದ್ರೆ ಚರ್ಚೆಗೆ ಬರ್ತೀರಾ?: ಶಾ
ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಸನ್ನಿಧಾನದಲ್ಲಿ ನವೆಂಬರ್‌ 6ರಿಂದ ದೀಪಾವಳಿ ಜಾತ್ರೆ