ವ್ಯಾಂಕೋವರ್: ಕೆನಡಾದಲ್ಲಿ ಮತ್ತೆ ಗುಂಡಿನ ದಾಳಿ ಸದ್ದು ಮಾಡಿದೆ. ಇಲ್ಲಿನ ಶಾಲೆಯೊಂದರಲ್ಲಿ ಶೂಟೌಟ್ ನಡೆದಿದ್ದು ದಾಳಿಕೋರ ಸೇರಿ 8 ಮಂದಿ ಬಲಿಯಾಗಿದ್ದಾರೆ. ಮತ್ತೊಂದೆಡೆ ದಾಳಿಗೆ ಸಂಬಂಧಿಸಿದ್ದು ಎನ್ನಲಾದ ಮನೆಯೊಂದರಲ್ಲಿ ಇಬ್ಬರು ಬಲಿಯಾಗಿದ್ದಾರೆ.
ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್ ಸೆಕೆಂಡರಿ ಶಾಲೆಯಲ್ಲಿ ಘಟನೆ ನಡೆದಿದೆ. ದಾಳಿಯಿಂದಾಗಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಗುಂಡು ಹಾರಿಸಿದ ವ್ಯಕ್ತಿಯೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆದರೆ ತನಿಖಾಧಿಕಾರಿಗಳು ದಾಳಿಕೋರನ್ನು ಹೆಸರನ್ನು ಬಹಿರಂಗಪಡಿಸಿಲ್ಲ. ಬಂದೂಕುಧಾರಿ ಯಾವ ಕಾರಣಕ್ಕಾಗಿ ಗುಂಡು ಹಾರಿಸಿದ್ದಾನೆ ಎನ್ನುವುದು ಗೊತ್ತಾಗಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇತ್ತೀಚೆಗಷ್ಟೇ ಕೆನಡಾದಲ್ಲಿ ಕರ್ನಾಟಕ ಮೂಲದ ಎಂಜಿನಿಯರ್ 37 ವರ್ಷದ ಚಂದನ್ ಕುಮಾರ್‌ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.