ಸಿಂಗಾಪುರದಲ್ಲಿ ಹೊಸ ಕೋವಿಡ್‌ ಅಲೆ

KannadaprabhaNewsNetwork |  
Published : May 19, 2024, 01:45 AM ISTUpdated : May 19, 2024, 06:59 AM IST
ಕೋವಿಡ್‌ | Kannada Prabha

ಸಾರಾಂಶ

ಸಿಂಗಾಪುರದಲ್ಲಿ ಕೋವಿಡ್‌ ತಳಿ ಹೊಸ ಅಲೆ ಕಾಣಿಸಿಕೊಂಡಿದ್ದು ಮೇ 5 ರಿಂದ 11ರ ವರೆಗೆ 25,900 ಪ್ರಕರಣಗಳು ಪತ್ತೆಯಾಗಿವೆ.

ಸಿಂಗಾಪುರ: ಸಿಂಗಾಪುರದಲ್ಲಿ ಕೋವಿಡ್‌ ತಳಿ ಹೊಸ ಅಲೆ ಕಾಣಿಸಿಕೊಂಡಿದ್ದು ಮೇ 5 ರಿಂದ 11ರ ವರೆಗೆ 25,900 ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಎಲ್ಲರೂ ತಪ್ಪದೇ ಮಾಸ್ಕ್‌ ಧರಿಸುವಂತೆ ಶನಿವಾರ ಆರೋಗ್ಯ ಸಚಿವ ಓಂಗ್‌ ಯೇ ಕುಂಗ್‌ ಜನಸಾಮಾನ್ಯರಿಗೆ ಸಲಹೆ ನೀಡಿದ್ದಾರೆ.

ಕೋವಿಡ್‌ನ ಹೊಸ ತಳಿಯ ಪ್ರಕರಣದಗಳು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮುಂದಿನ ನಾಲ್ಕೈದು ವಾರಗಳಲ್ಲಿ ಅಂದರೆ ಜೂನ್‌ ತಿಂಗಳ ಮಧ್ಯದಲ್ಲಿ ಪ್ರಕರಣಗಳ ಸಂಖ್ಯೆ ಇನ್ನಷ್ಟು ಏರಿಕೆಯಾಗಬಹುದು. ಆದ್ದರಿಂದ ಎಲ್ಲರೂ ತಪ್ಪದೇ ಮಾಸ್ಕ್‌ ಬಳಸುವ ಮೂಲಕ ರೋಗ ಹರಡುವಿಕೆಯನ್ನು ತಡೆಗಟ್ಟಬೇಕು ಎಂದು ಹೇಳಿದರು. ಕೋವಿಡ್‌ ಬಗ್ಗೆ ಆತಂಕ ಬೇಡ. ಇದಕ್ಕೆ ಆಸ್ಪತ್ರೆಗಳಲ್ಲಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದರು.

ಕಳೆದ ಕೆಲ ದಿನಗಳಿಂದ ಅಮೆರಿಕ, ಸಿಂಗಾಪುರ, ಹಾಂಗ್‌ಕಾಂಗ್‌, ಆಸ್ಟ್ರೇಲಿಯಾ, ಚಿಲಿ ಮೊದಲಾದ ದೇಶಗಳಲ್ಲಿ ಮತ್ತೆ ಭಾರೀ ಪ್ರಮಾಣದಲ್ಲಿ ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿವೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ಮರುಭೂಮಿ ಸೌದಿಯಲ್ಲಿ ಹಿಮಪಾತ, ಮಳೆ!