ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ- ಸಹಾಯವಾಣಿ ಸ್ಥಾಪನೆ

KannadaprabhaNewsNetwork |  
Published : Sep 29, 2026, 01:15 AM IST
  ಸಿಕೆಬಿ-4 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ   ನಡೆದ ರಾಜಕೀಯ ಪ್ರತಿನಿಧಿಗಳ ಸಭೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಸಿದ್ಧತೆಗಳು ಹಾಗೂ ಮತದಾರರ ಪಟ್ಟಿ ಕುರಿತು ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿದರು | Kannada Prabha

ಸಾರಾಂಶ

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ-2026ರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ಒದಗಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ-2026ರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ಒದಗಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಾಜಕೀಯ ಪ್ರತಿನಿಧಿಗಳ ಸಭೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಸಿದ್ಧತೆಗಳು ಹಾಗೂ ಮತದಾರರ ಪಟ್ಟಿ ಕುರಿತು ಮಾಹಿತಿ ನೀಡಿ ಮಾತನಾಡಿದರು.

ಚುನಾವಣಾ ವೇಳಾಪಟ್ಟಿ ಅಧಿಸೂಚನೆ ಸೆ.29ರಂದು ಪ್ರಕಟವಾಗಲಿದ್ದು, ಚಿಕ್ಕಬಳ್ಳಾಪುರ ಸೇರಿ ಐದು ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು 25,584 ಮತದಾರರು ನೋಂದಾಯಿಸಿಕೊಂಡಿದ್ದು, ಈ ಪೈಕಿ 14,597 ಪುರುಷರು ಹಾಗೂ 10,987 ಮಹಿಳಾ ಮತದಾರರಿದ್ದಾರೆ. ಅರ್ಹ ಪದವೀಧರರು ಸೆ.29ರೊಳಗಾಗಿ ನಮೂನೆ-18ರಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.

ಚುನಾವಣಾ ವೇಳಾಪಟ್ಟಿಯಂತೆ ಸೆ.29ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅ.6 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ.7 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ.9 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಅ.23ರಂದು ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಅ.27 ರಂದು ಮತಗಳ ಎಣಿಕೆ ನಡೆಯಲಿದೆ. ಅ.31 ರೊಳಗಾಗಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ 15 ಫ್ಲೈಯಿಂಗ್ ಸ್ಕ್ವಾಡ್‌ಗಳು, 8 ವಿಡಿಯೋ ಸರ್ವೆಲೆನ್ಸ್ ತಂಡಗಳು ಹಾಗೂ 8 ಸೆಕ್ಟರ್ ಅಧಿಕಾರಿಗಳ ತಂಡ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಚುನಾವಣೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಕರ್ನಾಟಕ ವೆಬ್‌ಸೈಟ್ ಹಾಗೂ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಸೇರಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಇದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಹಿರಿಯರು ಕಿರಿಯರಿಗೆ ದಾರಿ ದೀಪವಾಗಲಿ: ಜಿಲ್ಲಾಧಿಕಾರಿ ಜಿ.ಪ್ರಭು
ಚಾಟ್‌ಜಿಪಿಟಿಗೆ ತರಬೇತಿ ನಿಲ್ಲಿಸಿದ ಓಪನ್‌ಎಐ!