ಕ್ಷೇತ್ರ ಮರುವಿಂಗಡಣೆಗೆ ವಿರೋಧ : ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಂಬಲ ಕೋರಿದ ಸ್ಟಾಲಿನ್‌

KannadaprabhaNewsNetwork |  
Published : Mar 07, 2025, 11:48 PM ISTUpdated : Mar 08, 2025, 05:21 AM IST
Tamil Nadu CM MK Stalin (Photo/ANI)

ಸಾರಾಂಶ

 ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರುದ್ಧ ಹೋರಾಟಕ್ಕೆ ನಿರ್ಧರಿಸಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿ ಎನ್‌ಡಿಎಯೇತರ   ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಮುಖ್ಯಸ್ಥರಿಗೆ ಪತ್ರ ಬರೆದು ಬೆಂಬಲಯಾಚಿಸಿದ್ದಾರೆ.

ಚೆನ್ನೈ: ಕೇಂದ್ರ ಸರ್ಕಾರದ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರುದ್ಧ ಹೋರಾಟಕ್ಕೆ ನಿರ್ಧರಿಸಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಎನ್‌ಡಿಎಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಮುಖ್ಯಸ್ಥರಿಗೆ ಪತ್ರ ಬರೆದು ಬೆಂಬಲಯಾಚಿಸಿದ್ದಾರೆ.

ಕೇಂದ್ರದ ವಿರುದ್ಧದ ರಾಜಿರಹಿತ ಹೋರಾಟಕ್ಕಾಗಿ ರಚಿಸಲಾಗುವ ಜಂಟಿ ಕ್ರಿಯಾ ಸಮಿತಿ(ಜೆಎಸಿ)ಯ ಭಾಗವಾಗುವಂತೆ ಆಗ್ರಹಿಸಿದ್ದಾರೆ.

ಬಿಜೆಪಿಯೇತರ ಸರ್ಕಾರಗಳು ಅಧಿಕಾರದಲ್ಲಿರುವ ಕರ್ನಾಟಕ, ಕೇರಳ, ಪಂಜಾಬ್‌, ಒಡಿಶಾ, ಪಶ್ಚಿಮ ಬಂಗಾಳ, ತೆಲಂಗಾಣದ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಮುಖ್ಯಸ್ಥರಿಗೆ ಪತ್ರ ಬರೆದಿರುವ ಸ್ಟಾಲಿನ್‌, ಕ್ಷೇತ್ರಮರುವಿಂಗಡಣೆ ವಿರುದ್ಧ ಬೆಂಬಲ ಯಾಚಿಸಿದ್ದಾರೆ. ಈ ಸಂಬಂಧ ಚೆನ್ನೈನಲ್ಲಿ ಮಾ.22ರಂದು ಈ ಸಂಬಂಧ ಜಂಟಿ ಕ್ರಿಯಾ ಸಮಿತಿ ಸಭೆ ನಡೆಸುವ ಪ್ರಸ್ತಾಪ ಮುಂದಿಟ್ಟಿದ್ದಾರೆ.

ಕ್ಷೇತ್ರ ಮರುವಿಂಗಡಣೆಗೆ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ನಡೆಸಲಾಗುತ್ತದೆ. ಇದನ್ನು ಎರಡು ವಿಧಾನದಲ್ಲಿ ನಡೆಸುವ ಸಾಧ್ಯತೆಗಳಿವೆ. ಮೊದಲ ವಿಧಾನದಲ್ಲಿ ಹಾಲಿ ಇರುವ 543 ಕ್ಷೇತ್ರಗಳನ್ನು ರಾಜ್ಯಗಳ ನಡುವೆ ಮರುಹಂಚಿಕೆ ಮಾಡಲಾಗುತ್ತದೆ. ಮತ್ತೊಂದು ಸಾಧ್ಯತೆಯಲ್ಲಿ ಒಟ್ಟಾರೆ ಕ್ಷೇತ್ರಗಳ ಪ್ರಮಾಣವನ್ನು 800ಕ್ಕೆ ಏರಿಸಲಾಗುತ್ತದೆ. ಈ ಎರಡೂ ವಿಧಾನದಲ್ಲೂ 2026ರ ಜನಸಂಖ್ಯೆಯನ್ನು ಪರಿಗಣಿಸಿದರೆ ಜನಸಂಖ್ಯೆ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಂಡ ರಾಜ್ಯಗಳಿಗೆ ಅನ್ಯಾಯ ಆಗಲಿದೆ.

ಇದು ಗಂಭೀರ ವಿಚಾರವಾದರೂ ಕೇಂದ್ರ ಸರ್ಕಾರ ಈವರೆಗೆ ಸ್ಪಷ್ಟ ಮಾಹಿತಿ ನೀಡಿಲ್ಲ, ನಮ್ಮ ಕಳವಳ ಪರಿಹರಿಸಲು ಯತ್ನಿಸಿಲ್ಲ. ಸಮಾನಾನುಪಾತದಲ್ಲಿ ಮರುವಿಂಗಡಣೆ ನಡೆಯುತ್ತದೆ ಎಂದು ಅಸ್ಪಷ್ಟವಾಗಿ ಹೇಳಿದ್ದಾರೆ. ಆದರೆ, ಈ ರೀತಿಯ ಸಮಾನಾನುಪಾತದ ವಿಂಗಡಣೆಗೆ ಮೂಲ ಯಾವುದು ಎಂಬುದನ್ನು ಹೇಳಿಲ್ಲ ಎಂದು ಕಿಡಿಕಾರಿದ್ದಾರೆ.

ಜೆಎಸಿ ಮೂಲಕ ನಾವು ನಮ್ಮ ಪ್ರಾತಿನಿಧ್ಯ ಕಾಯ್ದುಕೊಳ್ಳಲು ಪರ್ಯಾಯವೊಂದನ್ನು ಅಭಿವೃದ್ಧಿಪಡಿಸಬಹುದು ಎಂದಿರುವ ಸ್ಟಾಲಿನ್‌, ಈ ಸಂಬಂಧ ಆರು ರಾಜ್ಯಗಳ ಸಿಎಂಗಳು, ನಾಯಕರಿಂದ ಜೆಎಸಿ ರಚನೆ ಕುರಿತು ಔಪಚಾರಿಕ ಅನುಮತಿ ಕೇಳಿದ್ದಾರೆ. ಅಲ್ಲದೆ, ಪಕ್ಷದ ಹಿರಿಯ ಸದಸ್ಯರೊಬ್ಬರನ್ನು ಸಮಿತಿಗೆ ನಾಮನಿರ್ದೇಶನ ಮಾಡುವಂತೆಯೂ ಎಂದು ಮನವಿ ಮಾಡಿದ್ದಾರೆ.

PREV

Recommended Stories

ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕನ್ನಡಕ್ಕೆ ಎರಡು ಗರಿ