
ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವ ಜನೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ತಲಾ 33 ಸ್ಪರ್ಧಿಗಳಂತೆ ಒಟ್ಟು 1,023 ಸ್ಪರ್ಧಿಗಳು ಈ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಸ್ಪರ್ಧಿಗಳಿಗೆ ಯಾವುದೇ ತೊಂದರೆಯಾಗದಂತೆ ವಸತಿ, ಆಹಾರ, ಸಾರಿಗೆ ಸೇರಿ ಮತ್ತಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ, ಸ್ವಚ್ಛತೆ, ಬ್ಯಾನರ್, ಆಹಾರ ಮಳಿಗೆ ತೆರೆಯಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಯುವಜನೋತ್ಸವವನ್ನು ನವೆಂಬರ್ 28 ಮತ್ತು 29 ರಂದು ಎರಡು ದಿನಗಳ ಕಾಲ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಯುವಜನೋತ್ಸವದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ಚಿತ್ರಕಲೆ, ಕವನ ರಚನೆ ಹಾಗೂ ಬೀದಿ ನಾಟಕ ಸೇರಿದಂತೆ ಐದು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದರು.ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆ ಇದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕ ಸುಭಾಷ್ ಚಂದ್ರ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಈಶ್ವರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಜಿ.ಜಿ., ಟೂಡಾ ಆಯುಕ್ತ ಉಮೇಶ್ ಚಂದ್ರ, ಸಮಾಜ ಕಲ್ಯಾಣ ಇಲಾಖೆ ಡಾ: ಚಂದ್ರಕುಮಾರ್ ಎಚ್.ಎಲ್., ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.