ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕಬ್ಬಿಣದ ರಾಡ್‌ಗಳು, ಚೈನ್‌ಗಳು ಹಾಗೂ ಹರಿತವಾದ ಆಯುಧಗಳನ್ನು ತೆಗೆದುಕೊಂಡು ಹೋಗಿರುವ ಘಟನೆ ಉತ್ತರಪ್ರದೇಶದ ಮುಜಫ್ಫರ್‌ನಗರದಲ್ಲಿ ನಡೆದಿದೆ.
ಕೂಡಲೇ ಪರೀಕ್ಷಾ ಕೇಂದ್ರಕ್ಕೆ ಧಾವಿಸಿದ ಪೊಲೀಸರು, ವಿದ್ಯಾರ್ಥಿಗಳ ದ್ವಿಚಕ್ರ ವಾಹನಗಳಿಗೆ ನೇತುಹಾಕಿದ್ದ ಬ್ಯಾಗ್‌ಗಳಲ್ಲಿದ್ದ ಕಬ್ಬಿಣದ ರಾಡ್‌ಗಳು, ಚೈನ್‌ಗಳು ಮತ್ತು ಹರಿತವಾದ ಆಯುಧಗಳು ವಶಪಡಿಸಿಕೊಂಡಿದ್ದು, ಈ ವಿದ್ಯಾರ್ಥಿಗಳಲ್ಲಿ 12 ಮಂದಿ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ.