ರೇರಾದಿಂದ ಬಿಲ್ಡರ್‌ ಮಾತ್ರ ಲಾಭ ಆಗ್ತಿದೆ : ಸುಪ್ರೀಂ ಕಿಡಿ ಆಕ್ಷೇಪ

Published : Feb 13, 2026, 07:17 AM IST
supreme court

ಸಾರಾಂಶ

ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು (ರೆರಾ) ಬಿಲ್ಡರ್‌ಗಳಿಗೆ ಅನುಕೂಲ ಮಾಡಿಕೊಡುತ್ತಿದೆಯೇ ಹೊರತು ಬೇರೇನೂ ಮಾಡುತ್ತಿಲ್ಲ. ಇದರ ಸ್ಥಾಪನೆ ಬಗ್ಗೆ ಎಲ್ಲಾ ರಾಜ್ಯಗಳು ಮರುಪರಿಶೀಲನೆ ನಡೆಸುವ ಸಮಯ ಬಂದಿದೆ’ ಎಂದು ಸುಪ್ರೀಂ ಕೋರ್ಟ್‌ ಗುರುವಾರ ಬೇಸರ ವ್ಯಕ್ತಪಡಿಸಿದೆ.

ನವದೆಹಲಿ:  ‘ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು (ರೆರಾ) ಬಿಲ್ಡರ್‌ಗಳಿಗೆ ಅನುಕೂಲ ಮಾಡಿಕೊಡುತ್ತಿದೆಯೇ ಹೊರತು ಬೇರೇನೂ ಮಾಡುತ್ತಿಲ್ಲ. ಇದರ ಸ್ಥಾಪನೆ ಬಗ್ಗೆ ಎಲ್ಲಾ ರಾಜ್ಯಗಳು ಮರುಪರಿಶೀಲನೆ ನಡೆಸುವ ಸಮಯ ಬಂದಿದೆ’ ಎಂದು ಸುಪ್ರೀಂ ಕೋರ್ಟ್‌ ಗುರುವಾರ ಬೇಸರ ವ್ಯಕ್ತಪಡಿಸಿದೆ.

ಶಿಮ್ಲಾದಿಂದ ಧರ್ಮಶಾಲಾಕ್ಕೆ ಸ್ಥಳಾಂತರಿಸುವ ವಿಷಯ

 ಹಿಮಾಚಲ ಪ್ರದೇಶದ ರೇರಾ ಕಚೇರಿಯನ್ನು ಶಿಮ್ಲಾದಿಂದ ಧರ್ಮಶಾಲಾಕ್ಕೆ ಸ್ಥಳಾಂತರಿಸುವ ವಿಷಯದಲ್ಲಿ ಹಿಮಾಚಲ ಪ್ರದೇಶ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಹಿಮಾಚಲ ಸರ್ಕಾರ ಮತ್ತು ಇತರರು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಸೂರ್ಯಕಾಂತ್‌ ಹಾಗೂ ನ್ಯಾ. ಜಯಮಾಲ್ಯ ಬಾಗ್ಚಿ ಅವರಿದ್ದ ಪೀಠ, ‘ರೇರಾವನ್ನು ಯಾರಿಗಾಗಿ ಸ್ಥಾಪಿಸಲಾಗಿದೆಯೋ ಅವರು ಸಂಪೂರ್ಣ ಬೇಸರಗೊಂಡಿದ್ದು, ನಿರಾಶರಾಗಿದ್ದಾರೆ.

ಬಿಲ್ಡರ್‌ಗಳಿಗೆ ಅನುಕೂಲ

 ಈ ಸಂಸ್ಥೆಯು ಬಿಲ್ಡರ್‌ಗಳಿಗೆ ಅನುಕೂಲ ಮಾಡುವುದನ್ನು ಬಿಟ್ಟು ಬೇರೇನನ್ನೂ ಮಾಡುತ್ತಿಲ್ಲ. ಇದನ್ನು ರದ್ದುಗೊಳಿಸುವುದೇ ಉತ್ತಮ, ಅದಕ್ಕೆ ನಮಗೆ ಅದರ ಬಗ್ಗೆ ಅಭ್ಯಂತರವಿಲ್ಲ’ ಎಂದಿತು. ಜೊತೆಗೆ, ‘ರೇರಾ ಸಂಸ್ಥೆಯ ಚಾಲನೆ ಬಗ್ಗೆ ಎಲ್ಲಾ ರಾಜ್ಯಗಳು ಮರುಚಿಂತನೆ ನಡೆಸಲು ಇದು ಸಕಾಲ’ ಎಂದು ಅಭಿಪ್ರಾಯಪಟ್ಟಿತು.

ಏನಿದು ರೇರಾ?: ರೇರಾ (ಆರ್‌ಇಆರ್‌ಎ) ಎಂದರೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ. ರಿಯಲ್ ಎಸ್ಟೇಟ್ ವಲಯವನ್ನು ನಿಯಂತ್ರಿಸಲು, ಪಾರದರ್ಶಕತೆಯನ್ನು ಹೆಚ್ಚಿಸಲು ಮತ್ತು ಮನೆ ಖರೀದಿದಾರರನ್ನು ರಕ್ಷಿಸಲು 2016 ರಲ್ಲಿ ಭಾರತೀಯ ಸಂಸತ್ತು ಅಂಗೀಕರಿಸಿದ ಒಂದು ಮಹತ್ವದ ಕಾಯ್ದೆ. ಇದರನ್ವಯ ಬಿಲ್ಡರ್‌ಗಳು ಅದರಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ನಿಯಮಾನುಸಾರ ಮನೆ ನಿರ್ಮಿಸಬೇಕು. ನಿಗದಿತ ಅವಧಿಯಲ್ಲಿ ಮನೆಗಳನ್ನು ಖರೀದಿದಾರರಿಗೆ ಹಸ್ತಾಂತರಿಸಬೇಕು ಎಂಬ ಇತ್ಯಾದಿ ನಿಯಮಗಳಿವೆ.==

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ರಾಗಾ ವಿರುದ್ಧ ಸಂಸತ್ತಲ್ಲಿ ಬಿಜೆಪಿಯ ಅನರ್ಹತೆ ಅಸ್ತ್ರ
7 ದಶಕಗಳ ಬಳಿಕಹೊಸ ಕಟ್ಟಡಕ್ಕೆ ಪ್ರಧಾನಿ ಕಚೇರಿ - ಇಂದು ‘ಸೇವಾ ತೀರ್ಥ’ ಉದ್ಘಾಟನೆ