ಬಿಜೆಪಿಯ ಗುಜರಾತಲ್ಲಿ ಕೇಜ್ರಿ ಆಪ್‌ಗೆ ಅಚ್ಚರಿಯ ಗೆಲುವು!

Published : Jun 24, 2025, 08:10 AM IST
arvind kejriwal

ಸಾರಾಂಶ

ಇತ್ತೀಚೆಗೆ ನಡೆದ 4 ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಅಚ್ಚರಿಯ ರೀತಿಯಲ್ಲಿ ಬಿಜೆಪಿ ಆಡಳಿತದ ಗುಜರಾತ್‌ನ ವಿಸಾವದರ್‌ ಕ್ಷೇತ್ರದಲ್ಲಿ ಆಮ್‌ಆದ್ಮಿ ಪಕ್ಷ ಗೆಲುವು ಸಾಧಿಸಿದೆ.

ನವದೆಹಲಿ: ಇತ್ತೀಚೆಗೆ ನಡೆದ 4 ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಅಚ್ಚರಿಯ ರೀತಿಯಲ್ಲಿ ಬಿಜೆಪಿ ಆಡಳಿತದ ಗುಜರಾತ್‌ನ ವಿಸಾವದರ್‌ ಕ್ಷೇತ್ರದಲ್ಲಿ ಆಮ್‌ಆದ್ಮಿ ಪಕ್ಷ ಗೆಲುವು ಸಾಧಿಸಿದೆ. 

ಈ ಮೂಲಕ ಕಳೆದ 18 ವರ್ಷಗಳಿಂದ ಕೈವಶವಾಗದ ಸ್ಥಾನ ವಶಪಡಿಸಿಕೊಳ್ಳುವ ಬಿಜೆಪಿ ಯತ್ನ ಮತ್ತೆ ವಿಫಲವಾಗಿದೆ. ಇಲ್ಲಿ ಆಪ್‌ನ ಗೋಪಾಲ್ ಇಟಾಲಿಯಾ ಬಿಜೆಪಿ ಅಭ್ಯರ್ಥಿ ಸೋಲಿ ಗೆಲುವು ಸಾಧಿಸಿದ್ದಾರೆ. ಇದು ಗುಜರಾತ್‌ನಲ್ಲಿ ಮತ್ತೆ ಬೇರೂರುವ ಯತ್ನ ಮಾಡುತ್ತಿರುವ ಆಪ್‌ಗೆ ಸಿಕ್ಕ ದೊಡ್ಡ ನೈತಿಕ ಗೆಲುವು ಎಂದು ಬಣ್ಣಿಸಲಾಗಿದೆ. ಜೊತೆಗೆ ದಿಲ್ಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ರಾಜಕೀಯದ ಹೊಸ ಅಧ್ಯಾಯ ಎನ್ನುವ ಚರ್ಚೆ ಹುಟ್ಟಿಸಿದೆ.

ಉಳಿದಂತೆ ಪಂಜಾಬ್‌ನ ಲೂಧಿಯಾನ ಪಶ್ಚಿಮ ಕ್ಷೇತ್ರದಲ್ಲಿ ಆಪ್‌ನ ಸಂಜೀವ್ ಆರೋರಾ, ಕೇರಳದ ನಿಲಂಬೂರ್‌ನಲ್ಲಿ ಕಾಂಗ್ರೆಸ್‌- ಯುಡಿಎಫ್‌ ಮೈತ್ರಿ ಅಭ್ಯರ್ಥಿ ಆರ್ಯದನ್‌ ಶೌಕತ್‌, ಗುಜರಾತ್‌ನ ಕಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್‌ಭಾಯ್‌ ಚವ್ಡಾ, ಪಶ್ಚಿಮ ಬಂಗಾಳದ ಕಾಲಿಗಂಜ್‌ನಲ್ಲಿ ಟಿಎಂಸಿಯ ಅಲಿಫಾ ಅಹ್ಮದ್‌ ಗೆದ್ದಿದೆ. ದೆಹಲಿ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಕೇಜ್ರಿವಾಲ್ ಒಂದರ್ಥದಲ್ಲಿ ತೆರೆಮರೆಗೆ ಸರಿದಿದ್ದರು. ಆದರೆ ಈಗ ಈ ಅವಳಿ ಗೆಲುವು ಆಪ್‌ ನಾಯಕ ರಾಜಕಾರಣದಲ್ಲಿ ಮತ್ತೆ ಸಕ್ರಿಯರಾಗಲಿದ್ದಾರೆ ಎನ್ನುವ ಚರ್ಚೆ ಹುಟ್ಟುಹಾಕಿದೆ. ಪಂಜಾಬ್‌ನಿಂದ ಕೇಜ್ರಿವಾಲ್ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎನ್ನುವ ಮಾತು ಮತ್ತೆ ಮುನ್ನೆಲೆಗೆ ಬಂದಿದೆ..

PREV
Read more Articles on

Recommended Stories

65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಶುಭಾಂಶು ಶುಕ್ಲಾ ವಾರಾಂತ್ಯಕ್ಕೆ ಭಾರತಕ್ಕೆ