ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಘೋಷಿಸಿದ್ದ 1 ಕೋಟಿ ಮನೆಗಳಿಗೆ ಸೋಲಾರ್ ಛಾವಣಿ ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ಗೆ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ಅಯೋಧ್ಯೆಯಲ್ಲಿ ನಿರ್ಮಿಸಲಾದ ರಾಮಮಂದಿರದಲ್ಲಿ ಬಾಲಕ ರಾಮನ ಪ್ರಾಣಪ್ರತಿಷ್ಠೆ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಘೋಷಿಸಿದ್ದ 1 ಕೋಟಿ ಮನೆಗಳಿಗೆ ಸೋಲಾರ್ ಛಾವಣಿ ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ಗೆ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ಈ ಯೋಜನೆಯ ಫಲಾನುಭವಿಗಳಿಗೆ ಪ್ರತಿ ತಿಂಗಳು 300 ಯುನಿಟ್‌ಗಳಷ್ಟು ಉಚಿತ ವಿದ್ಯುತ್ ನೀಡಲಾಗುವುದು. ಜೊತೆಗೆ, ಅವರು ಉತ್ಪಾದಿಸಿದ ಹೆಚ್ಚುವರಿ ಸೌರವಿದ್ಯುತ್ತನ್ನು ವಿದ್ಯುತ್ ವಿತರಕ ಕಂಪನಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
ಬಜೆಟ್ ಭಾಷಣದಲ್ಲಿ ರಾಮಮಂದಿರದಲ್ಲಿ ನಡೆದ ಪ್ರಾಣಪ್ರತಿಷ್ಠೆಯನ್ನು ಉಲ್ಲೇಖಿಸಿದ ಅವರು, ‘ಅಯೋಧ್ಯೆಯಲ್ಲಿ ನಡೆದ ಐತಿಹಾಸಿಕ ಪ್ರಾಣಪ್ರತಿಷ್ಠೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಯೋಜನೆಯಡಿ ಈ ಕೆಳಕಂಡ ಅನುಕೂಲಗಳನ್ನು ಮಾಡಿಕೊಡಲಾಗುತ್ತಿದೆ’ ಎಂದು ಪ್ರಕಟಿಸಿದರು.