ನ.1ರಿಂದ ದಕ್ಷಿಣ ಭಾರತದ ಪ್ರಮುಖ ಚಿತ್ರೋದ್ಯಮವೇ ಬಂದ್‌ : ತಾತ್ಕಾಲಿಕವಾಗಿ ಚಿತ್ರ ನಿರ್ಮಾಣ ಸ್ಥಗಿತ

KannadaprabhaNewsNetwork |  
Published : Aug 20, 2024, 01:50 AM ISTUpdated : Aug 20, 2024, 04:46 AM IST
ಮೂವಿ | Kannada Prabha

ಸಾರಾಂಶ

ತಾರೆಯರ ದುಬಾರಿ ಸಂಭಾವನೆ ಮತ್ತು ಅನುಪಸ್ಥಿತಿಯಿಂದಾಗಿ ತಮಿಳು ಚಿತ್ರೋದ್ಯಮವು ಚಿತ್ರ ನಿರ್ಮಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. 

ಚೆನ್ನೈ:  ಮೊಬೈಲ್‌, ಒಟಿಟಿ ವೇದಿಕೆಗಳಿಂದಾಗಿ ಚಲನಚಿತ್ರರಂಗ ಭಾರೀ ಹೊಡೆತ ಅನುಭವಿಸುತ್ತಿರುವ ಹೊತ್ತಿನಲ್ಲೇ ದಕ್ಷಿಣ ಭಾರತದ ಪ್ರಮುಖ ಚಿತ್ರೋದ್ಯಮವಾದ ತಮಿಳು ಚಿತ್ರೋದ್ಯಮ, ತಾತ್ಕಾಲಿಕವಾಗಿ ಚಿತ್ರ ನಿರ್ಮಾಣವನ್ನೇ ಸ್ಥಗಿತಗೊಳಿಸುವ ಐತಿಹಾಸಿಕ ನಿರ್ಧಾರವೊಂದನ್ನು ಕೈಗೊಂಡಿದೆ.

ಖ್ಯಾತನಾಮ ನಟ, ನಟಿಯರು, ತಂತ್ರಜ್ಞರ ದುಬಾರಿ ಸಂಭಾವನೆ, ಹಣ ಪಡೆದು ಶೂಟಿಂಗ್‌ಗೆ ಆಗಮಿಸದೇ ತೊಂದರೆ ನೀಡುವ ಪ್ರವೃತ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಚಲನಚಿತ್ರ ಶೂಟಿಂಗ್‌ ನಿಲ್ಲಿಸಲು ತಮಿಳು ಚಿತ್ರ ನಿರ್ಮಾಪಕರ ಮಂಡಳಿ ನಿರ್ಧರಿಸಿದೆ. ಇದಕ್ಕೆ ಥಿಯೇಟರ್‌ ಮಾಲೀಕರ ಸಂಘ, ಚಿತ್ರ ಹಂಚಿಕೆದಾರರ ಸಂಘ ಕೂಡಾ ಬೆಂಬಲ ವ್ಯಕ್ತಪಡಿಸಿರುವ ಕಾರಣ ಈ ಬಂದ್ ಯಶಸ್ವಿಯಾಗುವುದು ಖಚಿತವಾಗಿದೆ.

ಬಂದ್‌ ಏಕೆ?:

ನಟ, ನಟಿಯರು, ತಂತ್ರಜ್ಞರು ಇತ್ತೀಚಿನ ದಿನಗಳಲ್ಲಿ ತಮ್ಮ ಸಂಭಾವನೆ ಭಾರೀ ಪ್ರಮಾಣದಲ್ಲಿ ಏರಿಸಿದ್ದಾರೆ. ಇನ್ನೊಂದೆಡೆ ಭಾರೀ ಹಣ ಪಡೆದ ಮೇಲೂ ನಟರು, ತಂತ್ರಜ್ಞರು ಶೂಟಿಂಗ್‌ ಅಥವಾ ಇತರೆ ಚಿತ್ರ ಸಂಬಂಧಿ ಕೆಲಸಕ್ಕೆ ಗೈರಾಗಿ ತೊಂದರೆ ನೀಡುತ್ತಿದ್ದಾರೆ. ಇನ್ನು ಕೆಲವು ಪ್ರಕರಣಗಳಲ್ಲಿ ಯೋಜನೆ ಆರಂಭದ ಬಳಿಕ ಅದಕ್ಕೆ ಕೈಕೊಟ್ಟು ಮತ್ತೊಂದು ಚಿತ್ರ ಒಪ್ಪಿಕೊಳ್ಳುತ್ತಿದ್ದಾರೆ. ಹೀಗಾಗಿ ನಿರ್ಮಾಪಕರಿಗೆ ಭಾರೀ ನಷ್ಟವಾಗುತ್ತಿದೆ.

ಹೀಗಾಗಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆ.16ರಿಂದಲೇ ಜಾರಿಯಾಗುವಂತೆ ಚಲನಚಿತ್ರರಂಗದ ಚಟುವಟಿಕೆಗಳನ್ನು ಹಂತಹಂತವಾಗಿ ನಿಲ್ಲಿಸಲು ಇತ್ತೀಚೆಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಉದ್ದೇಶ ಏನು?

ನಟ, ತಂತ್ರಜ್ಞರ ಸಂಭಾವನೆ ಕುರಿತು ವಿವಿಧ ಸಂಘಟನೆಗಳ ಜೊತೆ ಸಮಾಲೋಚನೆ

ಒಟ್ಟಾರೆ ಚಲನಚಿತ್ರ ನಿರ್ಮಾಣ ವೆಚ್ಚ ಕಡಿತ ಮಾಡಿ ನಿರ್ಮಾಪಕರ ಹೊರೆ ಇಳಿಸಲು ಕ್ರಮ

ಶೂಟಿಂಗ್‌ ಅಥವಾ ಇತರೆ ಕೆಲಸ ಬಾಕಿ ಉಳಿದ ಚಿತ್ರಗಳ ಕೆಲಸ ಪೂರ್ಣಗೊಳಿಸುವುದು

ಥಿಯೇಟರ್‌ ಸಿಗದೇ ಉಳಿದ ಚಿತ್ರಗಳಿಗೆ ಅಗತ್ಯ ಪ್ರಮಾಣದ ಥಿಯೇಟರ್‌ ಒದಗಿಸುವುದು

ಏನೇನು ನಿರ್ಧಾರ?

- ಆ.16ರಿಂದ ಹೊಸ ಚಿತ್ರದ ಶೂಟಿಂಗ್‌ ಚಟುವಟಿಕೆಗಳು ಪೂರ್ಣ ಸ್ಥಗಿತ- ಈಗಾಗಲೇ ಆರಂಭವಾದ ಯೋಜನೆ ಅ.30ರೊಳಗೆ ಪೂರ್ಣಗೊಳಿಸಬೇಕು- ಪ್ರಮುಖ ನಟರ ಚಿತ್ರ ಥಿಯೇಟರ್‌ನಲ್ಲಿ ಬಿಡುಗಡೆಯಾದ 8 ವಾರ ಬಳಿಕ ಒಟಿಟಿಗಳಲ್ಲಿ ಬಿಡುಗಡೆ ಮಾಡಬೇಕು

----

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗಲ್ವಾನ್‌ ಸಂಘರ್ಷದ ಸೇನಾ ಪುಸ್ತಕದಿಂದ‘ರಾಜಕೀಯ ಕದನ’!
ಬಂಗಾಳದಲ್ಲಿ ಬಾಬ್ರಿ ಶೈಲಿ ಮಸೀದಿ ನಿರ್‍ಮಾಣ ಶುರು