ನವದೆಹಲಿ: ವಿಶ್ವದ ಮುಂಚೂಣಿ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿಯಾದ ಟೆಸ್ಲಾ, ಭಾರತದಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದು ಭಾರತದಲ್ಲಿ ಅದು ಶೀಘ್ರವೇ ತನ್ನ ಘಟಕ ಆರಂಭಿಸು ಸುಳಿವು ಎಂದು ಹೇಳಲಾಗಿದೆ. ಇತ್ತೀಚಿನ ಅಮೆರಿಕ ಭೇಟಿ ವೇಳೆ ಪ್ರಧಾನಿ ಮೋದಿ, ಮಸ್ಕ್‌ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
==
ಅಯೋಧ್ಯೆ ರಾಮಮಂದಿರ ಸ್ಥಳಕ್ಕೆ ಬೈಕಲ್ಲಿ ತೆರಳಲು ಕಿ.ಮೀಗೆ ₹300ಅಯೋಧ್ಯೆ: ಇಲ್ಲಿನ ರಾಮ ಮಂದಿರಕ್ಕೆ ಬರುವ ಭಕ್ತರ ಬಳಿ ಕಿಲೋಮೀಟರ್‌ಗೆ 300 ರು.ನಂತೆ ವಸೂಲಿ ಮಾಡಿ ವಿಐಪಿ ದರ್ಶನವೆಂದು ವಂಚಿಸುತ್ತಿದ್ದ ಬೈಕ್ ಸವಾರ ಜಾಲವೊಂದನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ
==
ಹೈದರಾಬಾದ್: ರಂಜಾನ್ ಸಮಯದಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿಯಿಂದ 1 ಗಂಟೆ ಮುಂಚೆ ತೆರಳಬಹುದು ಎಂದು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ. ಮಾರ್ಚ್ 2 ರಿಂದ 31 ರವರೆಗೆ ಈ ನಿಯಮವು ಜಾರಿಯಲ್ಲಿರಲಿದೆ. ಮುಸ್ಲಿಂ ಉದ್ಯೋಗಿಗಳಿಗೆ ಸಂಜೆ 5 ಗಂಟೆಯ ಬದಲು 4 ಗಂಟೆಗೆ ಕೆಲಸದಿಂದ ಬಿಡುವು ಸಿಗಲಿದೆ. ಶಿಕ್ಷಕರು, ಗುತ್ತಿಗೆ ಮತ್ತು ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಮುಸ್ಲಿಂ ಉದ್ಯೋಗಿಗಳಿಗೆ ಮತ್ತು ಮಂಡಳಿಗಳು, ನಿಗಮಗಳು ಮತ್ತು ಸಾರ್ವಜನಿಕ ಕೆಲಸದಲ್ಲಿ ಕೆಲಸ ಮಾಡುವ ನೌಕರರಿಗೆ ಅನ್ವಯಿಸುತ್ತದೆ. ರಂಜಾನ್ ಉಪವಾಸದ ತಿಂಗಳಿನಲ್ಲಿ ತಮ್ಮ ಧಾರ್ಮಿಕ ಕರ್ತವ್ಯಗಳು ಮತ್ತು ಪ್ರಾರ್ಥನೆಗಳನ್ನು ಬೆಂಬಲಿಸಲು ಈ ಕ್ರಮ ಎಂದು ಸರ್ಕಾರ ಹೇಳಿದೆ.ಈ ನಡುವೆ ಸರ್ಕಾರದ ಕ್ರಮವನ್ನು ಟೀಕಿಸಿರುವ ಬಿಜೆಪಿ ಶಾಸಕ ಟಿ.ರಾಜಾ, ‘ಕಾಂಗ್ರೆಸ್ ಕೇವಲ ಮುಸ್ಲಿಂ ಮತಗಳನ್ನು ಅವಲಂಬಿಸಿ ಅಧಿಕಾರವನ್ನು ಗಳಿಸಿದೆ. ಇಂಥ ನಿರ್ಧಾರ ತುಷ್ಟೀಕರಣದ ರಾಜಕೀಯ ಉತ್ತುಂಗವನ್ನು ಪ್ರತಿನಿಧಿಸುತ್ತದೆ’ ಎಂದಿದ್ದಾರೆ. ಇನ್ನು ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯ ಪ್ರತಿಕ್ರಿಯಿಸಿ ‘ನವರಾತ್ರಿಯಂತಹ ಹಬ್ಬಗಳಲ್ಲಿ ಹಿಂದೂಗಳು ಉಪವಾಸವನ್ನು ಆಚರಿಸುವಾಗ ಅಂತಹ ಯಾವುದೇ ರಿಯಾಯಿತಿ ನೀಡಲಾಗುವುದಿಲ್ಲ. ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಒಂದು ಸಮುದಾಯದವರ ಧಾರ್ಮಿಕ ಆಚರಣೆಗಳನ್ನು ಸರ್ಕಾರ ಮಾಡುತ್ತಿದೆ. ಈ ಕ್ರಮವನ್ನು ವಿರೋಧಿಸಬೇಕು’ ಎಂದಿದ್ದಾರೆ.
ಅಗತ್ಯವಿದ್ದರೆ ಜೆಲೆನ್ಸ್ಕಿಜೊತೆ ಮಾತುಕತೆಗೆ ಸಿದ್ಧ: ಪುಟಿನ್
ರಷ್ಯಾ ಮತ್ತು ಅಮೆರಿಕದ ರಾಜತಾಂತ್ರಿಕ ಅಧಿಕಾರಿಗಳು ಮಂಗಳವಾರ ಸೌದಿಯಲ್ಲಿ ಭೇಟಿಯಾಗಿ ಅಮೆರಿಕ ರಷ್ಯಾ ಮತ್ತು ಉಕ್ರೇನ್‌ನಲ್ಲಿರುವ ಯುದ್ಧವನ್ನು ಅಂತ್ಯಗೊಳಿಸಲು ಮಾತುಕತೆ ನಡೆಸಿದ್ದರು. ಆದರೆ ಈ ಸಭೆಯಲ್ಲಿ ಉಕ್ರೇನ್ ಅಧಿಕಾರಿಗಳು ಭಾಗವಹಿಸಿರಲಿಲ್ಲ.
ವಧುವಿನ ತಂದೆ ಕೊಟ್ಟ ವರದಕ್ಷಿಣೆ ತಿರಸ್ಕರಿಸಿದ ರಾಜಸ್ಥಾನದ ಯುವಕ
ಜೈಸಲ್ಮೇರ್: ಮದುವೆ ಮಂಟಪದಲ್ಲಿ ವಧುವಿನ ತಂದೆ ನೀಡಿದ 5.5 ಲಕ್ಷ ವರದಕ್ಷಿಣೆ ಹಣವನ್ನು ಹಿಂದಿರುಗಿಸುವ ಮೂಲಕ ರಾಜಸ್ಥಾನದ ಜೈಸಲ್ಮೇರ್‌ನ ಪರಮವೀರ ರಾಥೋಡ್ (30) ಎಂಬ ಯುವಕ ಸಮಾಜಕ್ಕೆ ಮೇಲ್ಪಂಕ್ತಿಯಾಗಿದ್ದಾನೆ. ನಾಗರಿಕ ಸೇವಾಕಾಂಕ್ಷಿಯಾಗಿರುವ ರಾಥೋಡ್ ಮತ್ತು ನಿಖಿತಾ ಮದುವೆ ಇತ್ತೀಚೆಗೆ ಆಯೋಜನೆಯಾಗಿತ್ತು. ಮದುವೆ ದಿನ ವಧುವಿನ ತಂದೆ ಸಿಂಗರಿಸಲ್ಪಟ್ಟ ತಟ್ಟೆಯಲ್ಲಿ 5,51,000 ರು. ಹಣವನ್ನು ತಂದು ವರನ ಮುಂದಿಟ್ಟರು. ಅದನ್ನು ಕಂಡು ಬೇಸರಗೊಂಡ ರಾಥೋಡ್ ಹಣ ಹಿಂದಿರುಗಿಸಿದ್ದಾರೆ. ‘ವಿದ್ಯಾವಂತರಾದ ನಮ್ಮಂಥವರೇ ಸಮಾಜದಲ್ಲಿ ಪರಿವರ್ತನೆ ತರದಿದ್ದರೆ ಇನ್ಯಾರು ತರುತ್ತಾರೆ? ನಾವು ಸಮಾಜಕ್ಕೆ ಮಾದರಿಯಾಗಬೇಕು. ಹಾಗಾಗಿ ಸಂಪ್ರದಾಯದಂತೆ ಆ ಸಂದರ್ಭದಲ್ಲಿ ಸ್ವೀಕರಿಸಿದರೂ ಬಳಿಕ ಅವರಿಗೆ ಹಣ ಹಿಂದಿರುಗಿಸಿದ್ದೇನೆ’ ಎಂದಿದ್ದಾರೆ.