ಕೇರಳ ಅವಳಿ ಸುರಂಗ ನಿರ್ಮಾಣ ಕಂಪನಿಗಿದೆ ಕರ್ನಾಟಕದ ನಂಟು!

Published : Jul 09, 2026, 12:51 PM IST
wayanad landslide

ಸಾರಾಂಶ

ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಅವಳಿ ಸುರಂಗ ನಿರ್ಮಿಸುತ್ತಿರುವ ದಿಲೀಪ್‌ ಬಿಲ್ಡ್‌ಕಾನ್‌ಗೆ ಕರ್ನಾಟಕದ ನಂಟಿದೆ. ಜೊತೆಗೆ ಕರ್ನಾಟಕದಲ್ಲಿ ಈ ಸಂಸ್ಥೆ ಕೈಗೊಂಡ ಹಲವು ಯೋಜನೆಗಳು ಕೂಡಾ ವಿವಾದಕ್ಕೆ ತುತ್ತಾಗಿದ್ದವು. ಅಲ್ಲದೆ ಕೆಲವೊಂದು ಕಾಮಗಾರಿಗಳಿಗೆ ಈ ಸಂಸ್ಥೆಗೆ ನಿರ್ಬಂಧ ಕೂಡಾ ಹೇರಲಾಗಿತ್ತು.

 ವಯನಾಡು: ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಅವಳಿ ಸುರಂಗ ನಿರ್ಮಿಸುತ್ತಿರುವ ದಿಲೀಪ್‌ ಬಿಲ್ಡ್‌ಕಾನ್‌ಗೆ ಕರ್ನಾಟಕದ ನಂಟಿದೆ. ಜೊತೆಗೆ ಕರ್ನಾಟಕದಲ್ಲಿ ಈ ಸಂಸ್ಥೆ ಕೈಗೊಂಡ ಹಲವು ಯೋಜನೆಗಳು ಕೂಡಾ ವಿವಾದಕ್ಕೆ ತುತ್ತಾಗಿದ್ದವು. ಅಲ್ಲದೆ ಕೆಲವೊಂದು ಕಾಮಗಾರಿಗಳಿಗೆ ಈ ಸಂಸ್ಥೆಗೆ ನಿರ್ಬಂಧ ಕೂಡಾ ಹೇರಲಾಗಿತ್ತು.

ನಂಟು

ಮೈಸೂರು- ಬೆಂಗಳೂರು ನಡುವಿನ 117 ಕಿ.ಮೀ ಮಾರ್ಗದ ಎಕ್ಸ್‌ಪ್ರೆಸ್‌ ಅನ್ನು 8480 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿದ್ದು ಇದೇ ದಿಲೀಪ್‌ ಬಿಲ್ಡ್‌ಕಾನ್‌. ಇದರ ಜೊತೆಗೆ ಮಂಗಳೂರಿನ ಕೆತ್ತಿಕಲ್‌ನಲ್ಲಿ ತಡೆಗೋಡೆಯನ್ನೂ ನಿರ್ಮಿಸಿತ್ತು. ತಡೆಗೋಡೆ ನಿರ್ಮಾಣದ ವೇಳೆ ಅವೈಜ್ಞಾನಿಕವಾಗಿ ಮಣ್ಣು ವಿಲೇವಾರಿ ಮಾಡಿದ ಆರೋಪ ಕೂಡಾ ಕಂಪನಿ ಮೇಲಿದೆ.

ವಿವಾದ:

ಮೈಸೂರು- ಬೆಂಗಳೂರು ಹೆದ್ದಾರಿ ಉದ್ಘಾಟನೆಗೊಂಡ ಬೆನ್ನಲ್ಲೇ ಭಾರೀ ಪ್ರಮಾಣದಲ್ಲಿ ವಾಹನಗಳ ಅಪಘಾತ ಸಂಭವಿಸಿ 3 ತಿಂಗಳಲ್ಲೇ 90ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದಕ್ಕೆ ಹೆದ್ದಾರಿ ವಿನ್ಯಾಸದಲ್ಲಿ ದೋಷ, ರಸ್ತೆಗೆ ಪ್ರವೇಶ ಮತ್ತು ಹೊರಹೋಗುವ ದಾರಿಗಳ ವಿನ್ಯಾಸದಲ್ಲಿ ದೋಷ, ಹೆದ್ದಾರಿ ನಿರ್ಮಾಣ ವೇಳೆ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಅಳವಡಿಸದೇ ಇರುವುದೇ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ ಇದೇ ಕಾಮಗಾರಿ ಹಣ ಪಾವತಿಗೆ ಲಂಚ ನೀಡಿದ ಆರೋಪದಲ್ಲಿ ಇದೇ ಸಂಸ್ಥೆಯ ಕೆಲ ಅಧಿಕಾರಿಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಇದೇ ಕಾರಣಕ್ಕೆ ಬೆಂಗಳೂರಿನ ಸುರಂಗ ರಸ್ತೆಗೆ ಬಿಡ್ಡಿಂಗ್‌ ಸಲ್ಲಿಸುವುದರಿಂದ ಈ ಕಂಪನಿಯನ್ನು ಹೊರಗಿಡಲಾಗಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಬೆಳಗಾವಿಗಾಗಿ ಮಹಾ ಸಿಎಂ ಫಡ್ನವೀಸ್‌ ಕ್ಯಾತೆ - ತ್ವರಿತ ವಿಚಾರಣೆಗಾಗಿ ಸುಪ್ರೀಂಗೆ ಅರ್ಜಿ
ದೇಶಾದ್ಯಂತ ಮುಂಗಾರು ಚುರುಕು, ಭಾರೀ ಮಳೆ