ಪಟನಾ: ಬಿಹಾರ ಸಿಎಂ ನಿತೀಶ್ ಕುಮಾರ್‌ನ್ನು ಗುಂಡಿಕ್ಕಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿರುವ ಸೋಷಿಯಲ್ ಮೀಡಿಯಾ ವಿಡಿಯೋದಲ್ಲಿ ಕಾಣಿಕೊಂಡಿದ್ದ 25 ವರ್ಷದ ಯುವಕನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಈ ಹಿಂದೆ ಇಬ್ಬರನ್ನು ಬಂಧಿಸಲಾಗಿತ್ತು. ಈಗ 3ನೇ ವ್ಯಕ್ತಿ ಬಂಧನವಾಗಿದೆ.
ಆರೋಪಿಯು ನಿತೀಶ್‌ರನ್ನು ಸಾರ್ವಜನಿಕವಾಗಿ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ ಮಾಡುವುದಾಗಿ ವಿಡಿಯೋದಲ್ಲಿ ಹೇಳಿದ್ದಾಗಿ ಒಪ್ಪಿಕೊಂಡಿದ್ದಾನೆ.ನಾನು ಮುಂಬೈನಲ್ಲಿ ಓದುತ್ತಿದ್ದೇನೆ. ನನ್ನನ್ನು ಕ್ಷಮಿಸಿ ಎಂದು ಬೇಡಿಕೊಂಡಿದ್ದಾನೆ.