ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಹೋದರ ಅನ್ಮೋಲ್ ಬಿಷ್ಣೋಯಿ ಹೆಸರಿನಲ್ಲಿ ಬೆದರಿಕೆ ಒಡ್ಡಿ 5 ಕೋಟಿ ರು.ಗೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ.
ಮುಂಬೈನ ವರ್ಲಿ ಪೊಲೀಸ್ ಕಂಟ್ರೋಲ್ ರೂಂಗೆ ಅನ್ಮೋಲ್ ಹೆಸರಲ್ಲಿ ಈತ ಸಂದೇಶ ಕಳಿಸಿದ್ದ. ‘ಸಲ್ಮಾನ್ ಜೀವಂತವಾಗಿರಲು ಬಯಸಿದರೆ ಬಿಷ್ಣೋಯಿ ಸಮುದಾಯದ ದೇವಸ್ಥಾನಕ್ಕೆ ಹೋಗಿ, ಕೃಷ್ಣಮೃಗವನ್ನು ಕೊಂದದ್ದಕ್ಕೆ ಕ್ಷಮೆ ಯಾಚಿಸಬೇಕು. ಇಲ್ಲವೇ 5 ಕೋಟಿ ರು. ಕೊಡಬೇಕು. ಹೀಗೆ ಮಾಡದಿದ್ದಲ್ಲಿ ನಾವು ಆತನನ್ನು ಕೊಲ್ಲುತ್ತೇವೆ. ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ’ ಎಂದು ಬೆದರಿಸಿದ್ದ.
ಈ ಹಿನ್ನೆಲೆಯಲ್ಲಿ ಸಲ್ಮಾನ್‌ಗೆ ನೀಡಲಾಗಿದ್ದ ಭದ್ರತೆಯನ್ನು ಹೆಚ್ಚಿಸಲಾಗಿದೆ.