3ನೇ ಮಗು ಹುಟ್ಟಿದ್ದಕ್ಕೆ ಇಬ್ಬರು ಕಾರ್ಪೊರೇಟರ್‌ಗಳು ಡಿಸ್ಮಿಸ್!

KannadaprabhaNewsNetwork |  
Published : May 25, 2024, 12:49 AM ISTUpdated : May 25, 2024, 06:16 AM IST
infant child

ಸಾರಾಂಶ

ಗುಜರಾತ್‌ನ ಅಮ್ರೇಲಿ ಜಿಲ್ಲೆಯ ದಾಮ್‌ನಗರ ನಗರಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರು 3ನೇ ಮಗು ಜನಿಸಿದ್ದಕ್ಕೆ ತಮ್ಮ ಸದಸ್ಯತ್ವ ಕಳೆದುಕೊಂಡಿದ್ದಾರೆ. ಅರ್ಥಾತ್‌ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.

ಅಹಮದಾಬಾದ್: ಗುಜರಾತ್‌ನ ಅಮ್ರೇಲಿ ಜಿಲ್ಲೆಯ ದಾಮ್‌ನಗರ ನಗರಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರು 3ನೇ ಮಗು ಜನಿಸಿದ್ದಕ್ಕೆ ತಮ್ಮ ಸದಸ್ಯತ್ವ ಕಳೆದುಕೊಂಡಿದ್ದಾರೆ. ಅರ್ಥಾತ್‌ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.

ಖೀಮಾ ಕಸೋಟಿಯಾ ಮತ್ತು ಮೇಘನಾ ಬೋಖಾ ಅವರೇ ಅನರ್ಹ ಬಿಜೆಪಿ ಸದಸ್ಯರು. ಇವರು ಅನರ್ಹರಾದರೂ ನಗರಪಾಲಿಕೆ ಬಿಜೆಪಿ ತೆಕ್ಕೆಯಲ್ಲೇ ಇರಲಿದೆ. ಏಕೆಂದರೆ ಅಷ್ಟು ಬಹುಮತ ಬಿಜೆಪಿಗೆ ಇದೆ.

2005-06 ರಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ 1963ರ ಮುನ್ಸಿಪಲ್ ಕಾಯಿದೆಗೆ ತಿದ್ದುಪಡಿ ಮಾಡಿ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ ಯಾವುದೇ ವ್ಯಕ್ತಿ ಪಂಚಾಯತ್, ಪುರಸಭೆಗಳು ಮತ್ತು ಮುನ್ಸಿಪಲ್ ಕಾರ್ಪೊರೇಶನ್‌ಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಿದ್ದರು. ಬಳಿಕ ಇನ್ನೊಂದು ತಿದ್ದುಪಡಿ ತಂದು ಅಧಿಕಾರಾವಧಿಯಲ್ಲಿ 3ನೇ ಮಗು ಜನಿಸಿದರೆ ಇವರು ಅನರ್ಹರಾಗಲಿದ್ದಾರೆ ಎಂಬ ಎಂಬ ನಿಯಮ ಸೇರಿಸಿದ್ದರು.

ಈ ನಡುವೆ ಇತ್ತೀಚೆಗೆ ವಜ್ರ ವ್ಯಾಪಾರಿಯೊಬ್ಬರು ಈ ಇಬ್ಬರೂ ಸದಸ್ಯರಿಗೆ ಮೂರನೇ ಮಗುವಾಗಿದೆ ಎಂದು ದೂರು ನೀಡಿದ್ದರು. ಈ ಪ್ರಕಾರ ಈಗ ಈ ಇಬ್ಬರ 3ನೇ ಮಗು ಜನಿಸಿದ ಮಾಹಿತಿ ಅಮ್ರೇಲಿ ಜಿಲ್ಲಾಧಿಕಾರಿಗೆ ದೊರಕಿದೆ. ಹೀಗಾಗಿ ಇಬ್ಬರನ್ನೂ ಅನರ್ಹ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ನಡುವೆ, ತಾವು ಸ್ಪರ್ಧಿಸುವಾಗ ತಮಗೆ 2 ಮಕ್ಕಳಿದ್ದವು. 3ನೇ ಮಗು ತಮ್ಮ ಆಯ್ಕೆ ನಂತರ ಆಗಿದೆ ಎಂದು ಈ ಇಬ್ಬರು ವಾದಿಸಿದರೂ ಅವರ ವಾದ ತಳ್ಳಿಹಾಕಿದ ಜಿಲ್ಲಾಧಿಕಾರಿ, ನಿಯಮಾನುಸಾರ, ಅಧಿಕಾರಾವಧಿಯಲ್ಲಿ 3ನೇ ಮಗು ಜನಿಸಿದರೂ ಅನರ್ಹರಾಗುತ್ತಾರೆ ಎಂದು ಹೇಳಿ ಇಬ್ಬರ ಸದಸ್ಯತ್ವವನ್ನೂ ರದ್ದು ಮಾಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಜಕೀಯ ಪಕ್ಷಗಳಿಗೆ ₹3811 ಕೋಟಿ ಫಂಡ್‌ : ಬಿಜೆಪಿಗೇ 82%!
ಕಾಂಗ್ರೆಸ್‌ನಿಂದ ದೇಶ ವಿರೋಧಿ ಚಟುವಟಿಕೆ : ಮೋದಿ ಮತ್ತೆ ತರಾಟೆ