ಲೋಕಸಭಾ ಚುನಾವಣೆ ನಡೆಯುತ್ತಿರುವ ಕಾರಣ ಸಿಯಟಿಟಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸ್ಪಷ್ಟಪಡಿಸಿದೆ.
ನವದೆಹಲಿ: ಲೋಕಸಭೆಗೆ ಚುನಾವಣೆ ಘೋಷಣೆಯಾಗಿರುವ ಹೊರತಾಗಿಯೂ ಕೇಂದ್ರೀಯ ವಿಶ್ವವಿದ್ಯಾಲಯಗಳ ಪ್ರವೇಶಕ್ಕಾಗಿ ನಡೆಸುವ ಸಿಯುಇಟಿ-ಯುಜಿ ಪರೀಕ್ಷೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರದು ಎಂದು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಸ್ಪಷ್ಟಪಡಿಸಿದೆ.
ಈ ಕುರಿತು ಮಾಹಿತಿ ನೀಡಿದ ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್, ‘ಸಿಯುಇಟಿ ಪರೀಕ್ಷೆಯನ್ನು ಮುಂಚೆ ನಿಗದಿ ಮಾಡಿದಂತೆ ಮೇ 15 ಮತ್ತು 31ರೊಳಗೆ ನಡೆಸಲಾಗುವುದು.
ಪರೀಕ್ಷೆಗೆ ನೋಂದಣಿ ಮುಗಿದ ಬಳಿಕ ಅಧಿಕೃತ ದಿನಾಂಕವನ್ನು ಪರೀಕ್ಷಾರ್ಥಿಗಳಿಗೆ ತಿಳಿಸಲಾಗುವುದು’ ಎಂದು ತಿಳಿಸಿದ್ದಾರೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.