ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಭೇಟಿ : ಕಲಮಸ್ಸೇರಿ HMT ಕಾರ್ಖಾನೆ ಭವಿಷ್ಯದ ದರ್ಶನ

KannadaprabhaNewsNetwork |  
Published : Aug 20, 2024, 12:58 AM ISTUpdated : Aug 20, 2024, 04:49 AM IST
ಎಚ್‌ಡಿಕೆ ಭೇಟಿ | Kannada Prabha

ಸಾರಾಂಶ

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಕಲಮಸ್ಸೇರಿಯಲ್ಲಿರುವ ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಎಚ್‌ಎಂಟಿ) ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉತ್ಪಾದನೆ, ಬೇಡಿಕೆ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆ ಚರ್ಚಿಸಿದರು.

ಕೊಚ್ಚಿ: ಕೇರಳದ ಕಲಮಸ್ಸೇರಿಯಲ್ಲಿರುವ ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಎಚ್‌ಎಂಟಿ) ಕಾರ್ಖಾನೆಗೆ ಸೋಮವಾರ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಾರ್ಖಾನೆಯ ಎಲ್ಲಾ ವಿಭಾಗಳಿಗೆ ಖುದ್ದು ಭೇಟಿ ನೀಡಿ ವೀಕ್ಷಿಸಿ, ಉತ್ಪಾದನೆ, ಬೇಡಿಕೆ ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಭವಿಷ್ಯದ ಯೋಜನೆಗಳ ಬಗ್ಗೆ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಕಾರ್ಖಾನೆಯ ಯಂತ್ರೋಪಕರಣಗಳ ಕ್ಷಮತೆ, ಕಾರ್ಮಿಕರ ಸ್ಥಿತಿಗತಿಗಳು, ಆಡಳಿತ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು. ಕಾರ್ಮಿಕರ ಜತೆ ಸಂವಾದ ನಡೆಸಿದರು. ಬಳಿಕ ಕಾರ್ಮಿಕ ಸಂಘಟನೆಗಳ ಮುಖಂಡರ ಅಹವಾಲು ಆಲಿಸಿದರು. ಅಲ್ಲಿನ ಮಹಿಳಾ ಉದ್ಯೋಗಿಗಳು ಸಚಿವರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದರು.

ಭಾರತದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದಾಗಿದ್ದ ಹೆಚ್ ಎಂಟಿ ಕಾರ್ಖಾನೆಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪ್ರಧಾನಿಗಳ ಮಾರ್ಗದರ್ಶನದಲ್ಲಿ ಎಲ್ಲಾ ರೀತಿಯ ಮಾರ್ಗೋಪಾಯಗಳನ್ನು ಹುಡುಕಲಾಗುತ್ತಿದೆ. ಈಗಾಗಲೇ ನಾನು ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿರುವ ಹೆಚ್ ಎಂಟಿ ಘಟಕಗಳಿಗೆ ಭೇಟಿ ನೀಡಿದ್ದೇನೆ.

- ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗಲ್ವಾನ್‌ ಸಂಘರ್ಷದ ಸೇನಾ ಪುಸ್ತಕದಿಂದ‘ರಾಜಕೀಯ ಕದನ’!
ಬಂಗಾಳದಲ್ಲಿ ಬಾಬ್ರಿ ಶೈಲಿ ಮಸೀದಿ ನಿರ್‍ಮಾಣ ಶುರು